
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣ ಎದುರಿಸುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭಾವ ರಾಬರ್ಟ್ ವಾದ್ರಾ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ವಿದೇಶ ಪ್ರವಾಸ ಕೈಗೊಳ್ಳಲು ದೆಹಲಿಯ ನ್ಯಾಯಾಲಯವೊಂದು ಅನುಮತಿ ನೀಡಿದೆ.
ಅಮೆರಿಕ ಹಾಗೂ ನೆದರ್ಲೆಂಡ್ ದೇಶಗಳಿಗೆ 6 ವಾರ ಭೇಟಿ ನೀಡಲು ನ್ಯಾಯಾಲಯ ಸಮ್ಮತಿಸಿದೆ. ಆದರೆ ಬ್ರಿಟನ್‌ಗೆ ತೆರಳದಂತೆ ನಿರ್ಬಂಧ ಹೇರಿದೆ. ವಿದೇಶ ಪ್ರವಾಸಕ್ಕೆ ತೆರಳುವ ಮುನ್ನ ವಾದ್ರಾ 25 ಲಕ್ಷ ರು. ಬ್ಯಾಂಕ್ ಖಾತ್ರಿ ಒದಗಿಸಬೇಕು.
ಭಾರತಕ್ಕೆ ಮರಳಿದ 24 ತಾಸುಗಳಲ್ಲಿ ಆ ಕುರಿತು ಮಾಹಿತಿ ನೀಡಬೇಕು ಎಂದು ವಿಶೇಷ ನ್ಯಾಯಲಯ ಸೂಚಿಸಿದೆ. ತಮ್ಮ ದೊಡ್ಡ ಕರಳಿನಲ್ಲಿ ಸಣ್ಣ ಗಡ್ಡೆ ಇರುವ ಕಾರಣ ಚಿಕಿತ್ಸೆ ಪಡೆಯಲು ಬ್ರಿಟನ್ ಅಥವಾ ಇನ್ನಿತರೆ ದೇಶಕ್ಕೆ ತೆರಳಲು ಅನುಮತಿ ನೀಡಬೇಕು ಎಂದು ವಾದ್ರಾ ಅರ್ಜಿ ಸಲ್ಲಿಸಿದ್ದರು. ಬ್ರಿಟನ್‌ನಲ್ಲಿ ಬಂಗಲೆ ಖರೀದಿಸಿರುವ ಪ್ರಕರಣ ಇರುವ ಹಿನ್ನೆಲೆಯಲ್ಲಿ ಆ ದೇಶಕ್ಕೆ ತೆರಳದಂತೆ ನ್ಯಾಯಾಲಯ ಸೂಚಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.