
ನವದೆಹಲಿ[ಮೇ. 29] ದೊಡ್ಡ ಕರುಳಿನಲ್ಲಿ ಗಡ್ಡೆ ಇದ್ದು ಇದಕ್ಕೆ ಟ್ರೀಟ್ ಮೆಂಟ್ ತೆಗೆದುಕೊಳ್ಳಲು ಇಂಗ್ಲೆಂಡ್ ಗೆ ತೆರಳಬೇಕಾಗಿದೆ ಹಾಗಾಗಿ ಪಾಸ್ ಪೋರ್ಟ್ ಮೇಲಿನ ನಿರ್ಬಂಧ ತೆಗೆದು ವಿದೇಶಕ್ಕೆ ತೆರಳಲು ಅವಕಾಶ ಮಾಡಿಕೊಡಬೇಕು ಎಂದು ರಾಬರ್ಟ್ ವಾದ್ರಾ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.
ಹೆಚ್ಚಿನ ಆರೈಕೆಗಾಗಿ ಲಂಡನ್ ಗೆ ತೆರಳಬೇಕಿದ್ದು ಪಾಸ್ ಪೋರ್ಟ್ ಮೇಲಿನ ನಿರ್ಬಂಧ ತೆಗೆದು ಹಾಕಬೇಕು ಎಂದು ಕೇಳಿಕೊಂಡಿದ್ದಾರೆ. ದೆಹಲಿ ಗಂಗಾರಾಮ್ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಕೊಂಡಿರುವ ವಾದ್ರಾ ವಿದೇಶಕ್ಕೆ ತೆರಳಲು ಅನುಮತಿ ಕೇಳಿದ್ದಾರೆ.
ವಾದ್ರಾ ಪರ ವಕೀಲರಾದ ಕೆಟಿಎಸ್ ತುಳಸಿ ವಾದ ಮುಂದಿಟ್ಟಿದ್ದು, ತನಿಖೆಗೆ ನಮ್ಮ ಕಕ್ಷಿದಾದರರು ಎಲ್ಲ ರೀತಿಯ ಸಹಕಾರ ನೀಡುತ್ತ ಬಂದಿದ್ದಾರೆ. ವಾದ್ರಾ ಇಂಗ್ಲೆಂಡಿನಿಂದ ವಾಪಸಾದ ಮೇಲೆಯೂ ಮುಂದಿನ ವಿಚಾರಣೆ ನಡೆಸಬಹುದು ಎಂದು ಹೇಳಿದ್ದಾರೆ. ಅಕ್ರಮ ಹಣ ವಹಿವಾಟು ಪ್ರಕರಣದಲ್ಲಿ ವಾದ್ರಾ ತನಿಖೆ ಎದುರಿಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.