ಮತ್ತೆ ಹಾಸನಕ್ಕೆ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ವಾಪಸ್ ..?

First Published Jun 17, 2018, 12:56 PM IST
Highlights

ಹಾಸನ‌ ಜಿಲ್ಲಾಧಿಕಾರಿಯಾಗಿ ಮುಂದುವರೆಸಲು ರೋಹಿಣಿ ಸಿಂಧೂರಿ ಕಾನೂನು ಹೋರಾಟ ಪ್ರಕರಣದ ವಿಚಾರಣೆ ಹೈ ಕೋರ್ಟ್ ನಲ್ಲಿ ನಡೆಯಲಿದ್ದು, ನಾಳೆಯೇ ಪೂರ್ಣಗೊಳ್ಳುವ ಸಾಧ್ಯತೆ ಇದೆ. 

ಹಾಸನ :  ಹಾಸನ‌ ಜಿಲ್ಲಾಧಿಕಾರಿಯಾಗಿ ಮುಂದುವರೆಸಲು ರೋಹಿಣಿ ಸಿಂಧೂರಿ ಕಾನೂನು ಹೋರಾಟ ಪ್ರಕರಣದ ವಿಚಾರಣೆ ಹೈ ಕೋರ್ಟ್ ನಲ್ಲಿ ನಡೆಯಲಿದ್ದು, ನಾಳೆಯೇ ಪೂರ್ಣಗೊಳ್ಳುವ ಸಾಧ್ಯತೆ ಇದೆ. 

ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿಯವರನ್ನ ಬೆಂಗಳೂರು ಉದ್ಯೋಗ ಮತ್ತು ತರಬೇತಿ ಸಂಸ್ಥೆಗೆ ವರ್ಗಾವಣೆ ಮಾಡಿದ್ದು, ಈ ನಿಟ್ಟಿನಲ್ಲಿ ಅವರು ಅವಧಿಗೂ ಮುನ್ನವೇ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ ಕಾನೂನು ಹೋರಾಟ ಆರಂಭಿಸಿದ್ದರು. 

ಸರ್ಕಾರದ ‌ವರ್ಗಾವಣೆ ಆದೇಶವನ್ನು  ಪ್ರಶ್ನಿಸಿ ಸಿಎಟಿ ಮೆಟ್ಟಿಲೇರಿದ್ದರು.  ಬಳಿಕ ಸಿಎಟಿಯಲ್ಲಿ ಹಿನ್ನಡೆಯಾದ್ದರಿಂದ ಹೈಕೋರ್ಟ್ ಮೆಟ್ಟಿಲೇರಿ ಪುನಃ ಕಾನೂನು ಹೋರಾಟ ಮುಂದುವರಿಸಿದ್ದರು. 

ಬಳಿಕ ಸಿಎಟಿಯೇ ಪ್ರಕರಣವನ್ನು ಇತ್ಯರ್ಥಪಡಿಸಲು ಹೈಕೋರ್ಟ್ ಸೂಚಿಸಿದ್ದು, ವಿಚಾರಣೆ ನಡೆಸಿದ್ದ ಸಿಎಟಿ ಮತ್ತೆ  ಸರ್ಕಾರದ ವರ್ಗಾವಣೆ ಆದೇಶವನ್ನೇ ಎತ್ತಿ ಹಿಡಿದಿತ್ತು. ಬಳಿಕ‌ ಎರಡನೆ ಬಾರಿ‌ ಹೈಕೋರ್ಟ್ ನಲ್ಲಿ ಕಾನೂನು ಹೋರಾಟ ನಡೆಸುತ್ತಿದ್ದು, ಈ ಸಂಬಂಧ ನಾಳೆ ವಿಚಾರಣೆ ನಡೆಯಲಿದೆ.

ನಾಳೆ ವಿಚಾರಣೆ ಮುಗಿದು ಮತ್ತೆ‌ ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅವರು ವಾಪಸ್ ಆಗುವ ಸಾಧ್ಯತೆ ಇದ್ದು, ಸದ್ಯ ಅಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಜಾಫರ್ ಅವರನ್ನು ವರ್ಗಾವಣೆ ಮಾಡುವ ಸಾಧ್ಯತೆಗಳು ಹೆಚ್ಚಿದೆ.

click me!