ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯಿಂದ ಲೋಪವಾಗಿಲ್ಲ

By Suvarna Web DeskFirst Published Feb 23, 2018, 10:12 AM IST
Highlights

ಶ್ರವಣಬೆಳಗೊಳ ಮಹಾಮಸ್ತಕಾಭಿಷೇಕ ಕಾರ್ಯಕ್ರಮ ವೇಳೆ ಶಿಷ್ಟಾಚಾರ ಲೋಪವಾಗಿರುವ ಬಗ್ಗೆ ರಾಜ್ಯಪಾಲರು ಸರ್ಕಾರದ ಸ್ಪಷ್ಟನೆ ಕೋರಿಲ್ಲ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಬೆಂಗಳೂರು: ಶ್ರವಣಬೆಳಗೊಳ ಮಹಾಮಸ್ತಕಾಭಿಷೇಕ ಕಾರ್ಯಕ್ರಮ ವೇಳೆ ಶಿಷ್ಟಾಚಾರ ಲೋಪವಾಗಿರುವ ಬಗ್ಗೆ ರಾಜ್ಯಪಾಲರು ಸರ್ಕಾರದ ಸ್ಪಷ್ಟನೆ ಕೋರಿಲ್ಲ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ರಾಷ್ಟ್ರಪತಿ ರಾಮನಾಥ ಕೋವಿಂದ ಹಾಗೂ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದ್ದ ಶ್ರವಣಬೆಳಗೊಳದ ಮಹಾ ಮಸ್ತಕಾಭಿಷೇಕ ಸಂಬಂಧಿ ಕಾರ್ಯ ಕ್ರಮಗಳ ಆಯೋಜನೆಯಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದ್ದು, ಈ ಬಗ್ಗೆ ರಾಜಭವನದ ಅಧಿಕಾರಿಗಳು ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರಿಗೆ ಪತ್ರ ಬರೆದು ಈ ಲೋಪಗಳ ಬಗ್ಗೆ ಸ್ಪಷ್ಟನೆ ಕೋರಿದ್ದಾರೆ ಎಂಬ ವದಂತಿ ಹಬ್ಬಿ ತ್ತು.

ಆದರೆ, ರಾಜಭವನ ಇಂತಹ ಯಾವುದೇ ಸ್ಪಷ್ಟನೆಯನ್ನು ಕೋರಿ ಮುಖ್ಯ ಕಾರ್ಯದರ್ಶಿಯವರ ಕಚೇರಿಗೆ ಪತ್ರ ಬರೆದಿಲ್ಲ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ವಾಸ್ತವವಾಗಿ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನೇತೃತ್ವದಲ್ಲಿ ಮಹಾ ಮಸ್ತಕಾಭಿಷೇಕ ಸಂಬಂಧಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಮೂಲಗಳು ಹೇಳಿವೆ.

click me!