
ಬೆಂಗಳೂರು: ವಿಧಾನಸಭಾ ಚುನಾವಣೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ವರ್ಗಾವಣೆಗೆ ಚುನಾವಣಾ ಆಯೋಗ ಆಕ್ಷೇಪ ವ್ಯಕ್ತಪಡಿಸಿದ ಕಾರಣ ಅಮಾನತಿನಲ್ಲಿಡಲಾಗಿದ್ದ ಆದೇಶವನ್ನು ರಾಜ್ಯ ಸರ್ಕಾರವು ಹಿಂಪಡೆದಿದೆ.
ಏಳು ಐಎಎಸ್ ಅಧಿಕಾರಿಗಳ ಪೈಕಿ ಎಂ.ವಿ.ಜಯಂತಿ ಮತ್ತು ವೀಣಾ ಚೈತ್ರಾ ಅವರನ್ನು ಹೊರತುಪಡಿಸಿ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಆದೇಶವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದ್ದ ವೇಳೆ ರಾಜ್ಯ ಸರ್ಕಾರವುಜ.22ರಂದು ರೋಹಿಣಿ ಸಿಂಧೂರಿ ಸೇರಿದಂತೆ ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿತ್ತು.
ಚುನಾವಣೆ ಆಯೋಗದ ಗಮನಕ್ಕೆ ತರದೆ ವರ್ಗಾವಣೆಗೊಳಿಸಿದ ಹಿನ್ನೆಲೆಯಲ್ಲಿ ಆಯೋಗವು ಸರ್ಕಾರದ ಕ್ರಮಕ್ಕೆ ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ವರ್ಗಾವಣೆ ಆದೇಶವನ್ನು ಅಮಾನತಿನಲ್ಲಿರಿಸಿದ್ದ ಸರ್ಕಾರ, ಇದೀಗ ಆದೇಶವನ್ನು ವಾಪಸ್ ಪಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.