ಬೇಗ್ ರಾಜೀನಾಮೆ ಕೊಟ್ಟು ಬಿಜೆಪಿಯಿಂದ ಸ್ಪರ್ಧಿಸಲಿ: ರಿಜ್ವಾನ್‌

By Web DeskFirst Published 22, May 2019, 9:34 AM IST
Highlights

ಕಾಂಗ್ರೆಸ್‌ ಮೇಲೆ ಬೇಸರವಿದ್ದರೆ ರಾಜೀನಾಮೆ ಕೊಟ್ಟು ಬಿಜೆಪಿಯಿಂದ ಸ್ಪರ್ಧಿಸಲಿ: ರಿಜ್ವಾನ್‌| 

ಬೆಂಗಳೂರು[ಮೇ.22]: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಿಜ್ವಾನ್‌ ಅರ್ಷದ್‌ ಕೂಡ ರೋಷನ್‌ ಬೇಗ್‌ ವಿರುದ್ಧ ಹರಿಹಾಯ್ದಿದ್ದು, ಬೇಗ್‌ ಅವರಿಗೆ ಕಾಂಗ್ರೆಸ್‌ ಮೇಲೆ ಬೇಸರವಿದ್ದರೆ ರಾಜೀನಾಮೆ ಕೊಟ್ಟು ಶಿವಾಜಿನಗರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿ ಎಂದು ಸವಾಲು ಹಾಕಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅವರು ಯಾರ ಪರವಾಗಿ ಕೆಲಸ ಮಾಡಿದ್ದಾರೆ ಅನ್ನುವುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ. ಅವರು ಜನತಾದಳ ಬಿಟ್ಟು ಬಂದಾಗ ಶಾಸಕರನ್ನಾಗಿ, ಸಚಿವರನ್ನಾಗಿ ಮಾಡಿ ಕಾಂಗ್ರೆಸ್‌ ಪಕ್ಷ ಅಧಿಕಾರ ನೀಡಿದೆ. ತಮಗೆ ಟಿಕೆಟ್‌ ಸಿಗಲಿಲ್ಲ ಎಂದ ಮಾತ್ರಕ್ಕೆ ಕಾಂಗ್ರೆಸ್‌ ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದೆ ಎಂದು ಹೇಳಿಕೆ ನೀಡುವುದು ಸರಿಯಲ್ಲ ಎಂದರು.

Last Updated 22, May 2019, 9:34 AM IST