ರಾಮಮಂದಿರ ಪರ ರೋಷನ್ ಬೇಗ್ ಬ್ಯಾಟಿಂಗ್

Published : Nov 02, 2018, 12:04 PM ISTUpdated : Nov 02, 2018, 12:30 PM IST
ರಾಮಮಂದಿರ ಪರ ರೋಷನ್ ಬೇಗ್ ಬ್ಯಾಟಿಂಗ್

ಸಾರಾಂಶ

ರಾಮಮಂದಿರ ನಿರ್ಮಾಣದ ಪರ ಕರ್ನಾಟಕದ ಕಾಂಗ್ರೆಸ್ ನಾಯಕ, ಶಾಸಕ ರೋಷನ್ ಬೇಗ್ ಬ್ಯಾಟಿಂಗ್ ಮಾಡಿದ್ದಾರೆ. ಜೊತೆಗೆ ಭಾರತದಲ್ಲಿ ರಾಮಮಂದಿರ ನಿರ್ಮಿಸದೇ, ಪಾಕಿಸ್ತಾನದಲ್ಲಿ ನಿರ್ಮಿಸಲಾದೀತೇ ಎಂದು ಪ್ರಶ್ನಿಸಿದ್ದಾರೆ.   

ಬೆಂಗಳೂರು :  ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ವಿಷಯ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ ಹೊತ್ತಿನಲ್ಲೇ,  ರಾಮಮಂದಿರ ನಿರ್ಮಾಣದ ಪರ ಕರ್ನಾಟಕದ ಕಾಂಗ್ರೆಸ್ ನಾಯಕ, ಶಾಸಕ ರೋಷನ್ ಬೇಗ್ ಬ್ಯಾಟಿಂಗ್ ಮಾಡಿದ್ದಾರೆ. ಜೊತೆಗೆ ಭಾರತದಲ್ಲಿ ರಾಮಮಂದಿರ ನಿರ್ಮಿಸದೇ, ಪಾಕಿಸ್ತಾನದಲ್ಲಿ ನಿರ್ಮಿಸಲಾದೀತೇ ಎಂದು ಪ್ರಶ್ನಿಸಿದ್ದಾರೆ. 

ಈ ಬಗ್ಗೆ ಮಾತನಾಡಿದ ಅವರು, ಚುನಾವಣೆ ಬಂದಾಗಲೆಲ್ಲಾ ಬಿಜೆಪಿಗೆ ರಾಮಮಂದಿರ ವಿಷಯ ನೆನಪಾಗುತ್ತದೆ. ಕಳೆದ ನಾಲ್ಕೂವರೆ ವರ್ಷಗಳಿಂದ ಅದು ಸುಮ್ಮನಿತ್ತು. ಇದೀಗ ಪ್ರಕರಣ ಕೋರ್ಟ್ ಮೆಟ್ಟಿಲೇರಿದಾಗ ಅದು ಸುಗ್ರೀವಾಜ್ಞೆಯ ಮಾತುಗಳನ್ನು ಆಡುತ್ತಿದೆ ಎಂದು ಕಿಡಿಕಾರಿದ್ದಾರೆ. ಚುನಾವಣೆ ಬಂದಾಗ ಮಾತ್ರ ರಾಮಮಂದಿರ ವಿಷಯವನ್ನು ಬಿಜೆಪಿ ಪ್ರಸ್ತಾಪಿಸುವುದು ಬಿಡಬೇಕು.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ನನ್ನ ಪೂರ್ಣ ಬೆಂಬಲವಿದೆ. ಇದಕ್ಕೆ ಕರ್ನಾಟಕದ ಮುಸ್ಲಿಮರದ್ದೂ ವಿರೋಧವಿಲ್ಲ. ಹಿಂದೂ ಸೋದರರ ಭಾವನೆಗಳನ್ನು ನಾವು ಗೌರವಿಸುತ್ತೇವೆ. ಈ ವಿಷಯದಲ್ಲಿ ಬಿಜೆಪಿ ರಾಜಕೀಯ ಬಿಟ್ಟು, ಮಂದಿರ ನಿರ್ಮಾಣ ವಿಷಯವನ್ನು ಸಾಧು ಸಂತರಿಗೆ ಬಿಟ್ಟಿದ್ದರೆ ವಿಷಯ ಯಾವಾಗಲೋ ಇತ್ಯರ್ಥವಾಗಿ ಹೋಗುತ್ತಿತ್ತು ಎಂದು ಬೇಗ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಡ್ತಿ-ವರದಾ ನದಿ ಜೋಡಣೆ ಯೋಜನೆ ಮಹತ್ವ ಬಿಚ್ಚಿಟ್ಟ ಜಲತಜ್ಞ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ!
ಭಾಗಮಂಡಲ ದೇವಾಲಯದ ಮುಂಭಾಗ ಅಂಗಡಿ ಮಳಿಗೆ ನಿರ್ಮಾಣಕ್ಕೆ ಭಕ್ತರು ತೀವ್ರ ವಿರೋಧ