ಕೋರ್ಟ್ ಮೆಟ್ಟಿಲೇರಿದ ಕರುಣಾನಿಧಿ ‘ಅಂತ್ಯ ಸಂಸ್ಕಾರ’ ವಿವಾದ

First Published Aug 7, 2018, 9:38 PM IST
Highlights
  • ಮರೀನಾ ಬೀಚ್ ನಲ್ಲಿ ಅಂತ್ಯ ಸಂಸ್ಕಾರ ನಡೆಸಲು ಅವಕಾಶ ನೀಡಬೇಕು ಎಂದು  ಡಿಎಂಕೆ ಪಟ್ಟು
  • ರಾತ್ರಿ 10.30ಕ್ಕೆ  ಅರ್ಜಿ ವಿಚಾರಣೆ ನಡೆಸಲು ಒಪ್ಪಿಕೊಂಡ ಮದ್ರಾಸ್ ಹೈಕೋರ್ಟ್

ಚೆನ್ನೈ: ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಅಂತ್ಯ ಸಂಸ್ಕಾರಕ್ಕೆ ಜಾಗ ನಿಗದಿ ಮಾಡುವ ವಿಚಾರ ವಿವಾದಕ್ಕೆ ಕಾರಣವಾಗಿದ್ದು,  ಇದೀಗ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದೆ.

ಮರೀನಾ ಬೀಚ್ ನಲ್ಲಿ ಅಂತ್ಯ ಸಂಸ್ಕಾರ ನಡೆಸಲು ಅವಕಾಶ ನೀಡಬೇಕು ಎಂದು  ಡಿಎಂಕೆ ಪಕ್ಷವು  ಮನವಿ ಮಾಡಿಕೊಂಡಿದ್ದು,  ರಾತ್ರಿ 10.30ಕ್ಕೆ ವಿಚಾರಣೆ ನಡೆಸಲು ಮುಖ್ಯ ನ್ಯಾಯಮೂರ್ತಿ ಹುಲುವಾಡಿ ಜಿ ರಮೇಶ್  ಸಮ್ಮತಿಸಿದ್ದಾರೆ.

ಆದರೆ ಮರೀನಾ ಬೀಚ್ ನಲ್ಲಿ ಅವಕಾಶ ನೀಡುವ ಬಗ್ಗೆ ತಮಿಳುನಾಡು ಸರಕಾರ ಇಲ್ಲಿಯವರೆಗೆ ಯಾವುದೆ ಸ್ಪಷ್ಟನೆ ನೀಡಿಲ್ಲ. ತಮಿಳುನಾಡು ಸರಕಾರ ಕರುಣಾನಿಧಿ ಸಾವಿನಲ್ಲೂ ರಾಜಕಾರಣ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ದ್ರಾವಿಡ ಮುನ್ನೇತ್ರ ಕಳಗಂ (DMK) ಪಕ್ಷದ ಪರಮೋಚ್ಛ ನೇತಾರ ಮುತ್ತುವೇಲ್ ಕರುಣಾನಿಧಿ ಮಂಗಳವಾರ ಸಾಯಂಕಾಲ ಚೆನ್ನೈನಲ್ಲಿರುವ ಕಾವೇರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. 
 

click me!