
ಮುಂಬೈ[ಡಿ.19]: ಕಳೆದ ಲೋಕಸಭೆ ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಎಲ್ಲರ ಖಾತೆಗೂ 15 ಲಕ್ಷ ರುಪಾಯಿ ಬರಲಿದೆ. ಆದರೆ ನಿಧಾನವಾಗಿ ಬಂದು ಸೇರಲಿದೆ. ಒಂದೇ ‘ಏಟಿಗೆ’ ಬರಲ್ಲ ಎಂದು ಕೇಂದ್ರ ಸಚಿವ ಹಾಗೂ ಆರ್‌ಪಿಐ ಮುಖಂಡ ರಾಮದಾಸ ಅಠಾವಳೆ ಹೇಳಿದರು.
ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ‘ಈ ಸಂಬಂಧ ಹಣ ನೀಡುವಂತೆ ಭಾರತೀಯ ರಿಸವ್‌ರ್ ಬ್ಯಾಂಕ್‌ಗೆ ಕೇಳಿಕೊಳ್ಳಲಾಯಿತು. ಆದರೆ ಅವರು ಹಣ ನೀಡಲಿಲ್ಲ. ಹೀಗಾಗಿ ಅಲ್ಲಿಂದ ಹಣವನ್ನು ಪಡೆಯಲು ಆಗಲಿಲ್ಲ. ಕೆಲವು ತಾಂತ್ರಿಕ ಕಾರಣಗಳು ಇದಕ್ಕೆ ಅಡ್ಡಿಯಾದವು’ ಎಂದು ಸ್ಪಷ್ಟಪಡಿಸಿದರು.
ಕಳೆದ ಲೋಕಸಭೆ ಚುನಾವಣೆಗೆ ಮುನ್ನ ಕೆಲವು ಬಿಜೆಪಿ ನಾಯಕರು, ವಿದೇಶದಿಂದ ಕಪ್ಪುಹಣ ತಂದು ಎಲ್ಲರ ಖಾತೆಗಳಿಗೆ 15 ಲಕ್ಷ ರು. ಜಮಾ ಮಾಡಲಿದ್ದೇವೆ ಎಂದು ಹೇಳಿದ್ದರು. ಆದರೆ ಈವರೆಗೂ ಹಣ ಜಮೆಯಾಗಲಿಲ್ಲ ಎಂದು ಕಾಂಗ್ರೆಸ್ ಹಾಗೂ ಇತರ ಪ್ರತಿಪಕ್ಷಗಳು ಬಿಜೆಪಿಯನ್ನು ಕಿಚಾಯಿಸುತ್ತಲೇ ಇರುತ್ತವೆ ಎಂಬುದು ಇಲ್ಲಿ ಉಲ್ಲೇಖನೀಯ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ