
ಮುಂಬೈ: ಮಹಾರಾಷ್ಟ್ರ ಹಾಲು ಉತ್ಪಾದಕರಿಂದ ಹಾಲು ಒಕ್ಕೂಟಗಳು ಖರೀದಿಸುವ ಹಾಲಿನ ದರ ಏರಿಕೆ ಮಾಡಬೇಕೆಂಬ ಬೇಡಿಕೆ ಈಡೇರಿದ ಹಿನ್ನೆಲೆ ಯಲ್ಲಿ ರಾಜ್ಯದಲ್ಲಿ ಹಮ್ಮಿಕೊಳ್ಳಲಾಗಿದ್ದ ನಾಲ್ಕು ದಿನಗಳ ಪ್ರತಿಭಟನೆಯನ್ನು ರೈತರು ವಾಪಸ್ ಪಡೆದಿದ್ದಾರೆ.
ಜು.21 ರ ಬಳಿಕ ಪ್ರತೀ ಲೀಟರ್ ಹಾಲನ್ನು 25 ರು.ಗೆ ಖರೀದಿಸಲಾಗುತ್ತದೆ ಎಂದು ಮಹಾರಾಷ್ಟ್ರ ವಿಧಾನಸಭೆ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಹಿನ್ನೆಲೆ ಯಲ್ಲಿ ಪ್ರತಿಭಟನೆ ವಾಪಸ್ ಪಡೆಯಲಾಗಿದೆ ಎಂದು ಸಂಸದ ಮತ್ತು ಧರಣಿ ಮುಂದಾಳತ್ವ ವಹಿಸಿಕೊಂಡಿದ್ದ ಸ್ವಾಭಿಮಾನಿ ಶಟ್ಕಾರಿ ಸಂಘ ಟನೆ ಮುಖಂಡ ರಾಜು ಶೆಟ್ಟಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.