
ನವದೆಹಲಿ: ಗೋರಕ್ಷಣೆ ಹೆಸರಿನಲ್ಲಿ ಥಳಿಸುವ/ ಥಳಿಸಿ ಹತ್ಯೆಗೈಯುವ ಘಟನೆಗಳು ಇಂದು ಸಂಸತ್ತಿನಲ್ಲೂ ಪ್ರತಿಧ್ವನಿಸಿವೆ. ಈ ಬಗ್ಗೆ ನಾಳೆ ರಾಜ್ಯಸಭೆಯಲ್ಲಿ ಚರ್ಚೆ ನಡೆಯಲಿದೆ.
ಇದೇ ವಿಚಾರವಾಗಿ ಪ್ರತಿಪಕ್ಷಗಳು ನಡೆಸಿದ ಪ್ರತಿಭಟನೆಗಳಿಂದಾಗಿ ಸಂಸತ್ತು ಕಲಾಪಗಳನ್ನು ಇಂದು ಮುಂದೂಡಲಾಗಿತ್ತು. ಇನ್ನೊಂದು ಕಡೆ ದಲಿತರು ಹಾಗೂ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿಚಾರದಲ್ಲಿ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಕೂಡಾ ರಾಜೀನಾಮೆ ನೀಡಿದ್ದಾರೆ.
ಮನುಷ್ಯರನ್ನು ಥಳಿಸಿ ಹತ್ಯೆಗೈಯುವ ಘಟನೆಗಳು ಅವ್ಯಾಹತವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಚರ್ಚೆಯಾಗಬೇಕೆಂದು ಕಾಂಗ್ರೆಸ್ ನಿನ್ನೆ ನೋಟಿಸ್ ನೀಡಿತ್ತು.
ಸಂಸತ್ತು ಅಧಿವೇಶನ ರಂಭವಾಗುವ ಮುನ್ನ ಭಾನುವಾರ ನಡೆದ ಸರ್ವಪಕ್ಷ ಸಭೆಯಲ್ಲಿ, ಗೋರಕ್ಷಣೆ ಹೆಸರಿನಲ್ಲಿ ನಡೆಯುವ ಹಿಂಸಾಕೃತ್ಯಗಳನ್ನು ಖಂಡಿಸಿದ್ದ ಪ್ರಧಾನಿ ಮೋದಿ, ಅವುಗಳಿಗೆ ಅಂತ್ಯಹಾಡಲು ಎಲ್ಲಾ ಪಕ್ಷಗಳ ಹಾಗೂ ರಾಜ್ಯಸರ್ಕಾರಗಳ ಬೆಂಬಲ ಕೋರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.