ಕೇರಳದಲ್ಲಿ ಮತ್ತೊಬ್ಬ ಆರೆಸ್ಸೆಸ್ ಕಾರ್ಯಕರ್ತನ ಮೇಲೆ ಹಲ್ಲೆ

By Suvarna Web DeskFirst Published Oct 10, 2017, 6:55 PM IST
Highlights

ಮೊನ್ನೆ ಭಾನುವಾರದಂದು ಕಣ್ಣೂರಿನ ಪನೂರ್ ಎಂಬಲ್ಲಿ ಮಾರ್ಕ್ಸ್'ವಾದಿ ಕಮ್ಯೂನಿಸ್ಟ್ ಪಕ್ಷದ ಕಾರ್ಯಕರ್ತರು ನಡೆಸುತ್ತಿದ್ದ ಮೆರವಣಿಗೆ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದರು. ಐವರು ಕಮ್ಯೂನಿಸ್ಟ್ ಕಾರ್ಯಕರ್ತರು ಸೇರಿದಂತೆ 9 ಮಂದಿಗೆ ಗಾಯಗಳಾಗಿದ್ದವು. ಅದಕ್ಕೆ ಪ್ರತೀಕಾರವಾಗಿ ತಲಚ್ಚೇರಿಯಲ್ಲಿ ಆರೆಸ್ಸೆಸ್ ಕಾರ್ಯಕರ್ತನ ಮೇಲೆ ಹಲ್ಲೆಯಾಗಿರಬಹುದೆಂದು ಶಂಕಿಸಲಾಗಿದೆ.

ತಿರುವನಂತಪುರಂ(ಅ. 10): ಕೇರಳದಲ್ಲಿ ರಾಜಕೀಯ ಹಿಂಸಾಚಾರಗಳು ಮುಂದುವರಿಯುತ್ತಿವೆ. ಕಣ್ಣೂರಿನಲ್ಲಿ ಆರೆಸ್ಸೆಸ್ ಕಾರ್ಯಕರ್ತನೊಬ್ಬನ ಮೇಲೆ ಭೀಕರ ಹಲ್ಲೆ ನಡೆದಿರುವ ಘಟನೆ ವರದಿಯಾಗಿದೆ. ಆಟೋರಿಕ್ಷಾ ಚಾಲಕನಾಗಿದ್ದ ಆರೆಸ್ಸೆಸ್ ಕಾರ್ಯಕರ್ತನನ್ನು ವಾಹನದಿಂದ ಕೆಳಗಿಳಿಸಿ ರಾಡ್'ಗಳಿಂದ ಹೊಡೆದು ಹಲ್ಲೆ ಮಾಡಲಾಗಿದೆ. ಕಣ್ಣೂರಿನ ತಲಚ್ಚೇರಿಯಲ್ಲಿ ಈ ಘಟನೆ ನಡೆದಿದೆ. ಆತನ ತಲೆ ಮತ್ತು ಕಾಲಿಗೆ ಗಾಯಗಳಾಗಿವೆ. ಪೊಲೀಸರು ಸದ್ಯಕ್ಕೆ ಇದೊಂದು ರಾಜಕೀಯ ಹಲ್ಲೆ ಇರಬಹುದೆಂದು ಶಂಕಿಸಿ ಆ ದಿಕ್ಕಿನಲ್ಲಿ ತನಿಖೆ ನಡೆಸುತ್ತಿದ್ದಾರೆ.

ಹಲ್ಲೆಗೊಳಗಾದ ಆರೆಸ್ಸೆಸ್ ಕಾರ್ಯಕರ್ತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ತಂಡವೊಂದು ಆಸ್ಪತ್ರೆಗೆ ಹೋಗಿ ಕಾರ್ಯಕರ್ತನ ಹೇಳಿಕೆ ಪಡೆಯಲು ಯತ್ನಿಸುತ್ತಿದೆ.

Latest Videos

ಮೊನ್ನೆ ಭಾನುವಾರದಂದು ಕಣ್ಣೂರಿನ ಪನೂರ್ ಎಂಬಲ್ಲಿ ಮಾರ್ಕ್ಸ್'ವಾದಿ ಕಮ್ಯೂನಿಸ್ಟ್ ಪಕ್ಷದ ಕಾರ್ಯಕರ್ತರು ನಡೆಸುತ್ತಿದ್ದ ಮೆರವಣಿಗೆ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದರು. ಐವರು ಕಮ್ಯೂನಿಸ್ಟ್ ಕಾರ್ಯಕರ್ತರು ಸೇರಿದಂತೆ 9 ಮಂದಿಗೆ ಗಾಯಗಳಾಗಿದ್ದವು. ಅದಕ್ಕೆ ಪ್ರತೀಕಾರವಾಗಿ ತಲಚ್ಚೇರಿಯಲ್ಲಿ ಆರೆಸ್ಸೆಸ್ ಕಾರ್ಯಕರ್ತನ ಮೇಲೆ ಹಲ್ಲೆಯಾಗಿರಬಹುದೆಂದು ಶಂಕಿಸಲಾಗಿದೆ.

ಕಳೆದ ವಾರವಷ್ಟೇ ಭಾರತೀಯ ಜನತಾ ಪಕ್ಷವು ಕೇರಳದಲ್ಲಿ ನಡೆಯುತ್ತಿರುವ ರಾಜಕೀಯ ಹತ್ಯೆಗಳ ವಿರುದ್ಧ ರಣಕಹಳೆ ಮೊಳಗಿಸಿ 15 ದಿನಗಳ ಕಾಲ್ನಡಿಗೆ ಯಾತ್ರೆಗೆ ಚಾಲನೆ ನೀಡಿತ್ತು. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಕೇರಳದ ರಾಜಕೀಯ ಕೊಲೆಗಳಿಗೆ ಸಿಎಂ ಪಿನಾರಯಿ ವಿಜಯನ್ ಅವರೇ ಹೊಣೆ ಎಂದು ನೇರವಾಗಿ ಆರೋಪಿಸಿದ್ದಾರೆ.

click me!