78 ಶಾಸಕರಿಗೆ ಟಿಕೆಟ್ ನೀಡದಿರಲು ಬಿಜೆಪಿಗೆ ಆರ್ ಎಸ್ ಎಸ್ ಸಲಹೆ

Published : Oct 18, 2018, 05:44 PM IST
78 ಶಾಸಕರಿಗೆ ಟಿಕೆಟ್ ನೀಡದಿರಲು ಬಿಜೆಪಿಗೆ ಆರ್ ಎಸ್ ಎಸ್ ಸಲಹೆ

ಸಾರಾಂಶ

78 ಶಾಸಕರು ತಮ್ಮ ಕ್ಷೇತ್ರದಲ್ಲಿ ಕಳಪೆ ಪ್ರದರ್ಶನ ನೀಡಿರುವ ಬಗ್ಗೆ ಮಾಹಿತಿ ಪಡೆದಿರುವ ಸಂಘ ಪರಿವಾರ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಕೇವಲ ಗೆಲ್ಲುವ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡುವಂತೆ ತಿಳಿಸಿದೆ. 

ಭೋಪಾಲ್ [ಅ.18]: ನವೆಂಬರ್ 28ರಂದು ನಡೆಯಲಿರುವ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಹಾಲಿ 78 ಶಾಸಕರಿಗೆ ಟಿಕೆಟ್ ನೀಡದಿರಲು ಆರ್ ಎಸ್ ಎಸ್ ಬಿಜೆಪಿಗೆ ಸಲಹೆ ನೀಡಿದೆ.

ಅದೆ ರೀತಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಪ್ರಸ್ತುತ ಪ್ರತಿನಿಧಿಸುತ್ತಿರುವ ಬುದ್ನಿ ಕ್ಷೇತ್ರದ ಬದಲಾಗಿ ಗೋವಿಂದಪುರದಲ್ಲಿ ಸ್ಪರ್ಧಿಸುವಂತೆ ಸಲಹೆ ನೀಡಿದೆ.

78 ಶಾಸಕರು ತಮ್ಮ ಕ್ಷೇತ್ರದಲ್ಲಿ ಕಳಪೆ ಪ್ರದರ್ಶನ ನೀಡಿರುವ ಬಗ್ಗೆ ಮಾಹಿತಿ ಪಡೆದಿರುವ ಸಂಘ ಪರಿವಾರ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಕೇವಲ ಗೆಲ್ಲುವ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡುವಂತೆ ತಿಳಿಸಿದೆ. ನ್ಯಾಯಾಲಯದಲ್ಲಿ ಪ್ರಕರಣಗಳಿರುವ ಯಾವೊಬ್ಬ ಅಭ್ಯರ್ಥಿಗಳಿಗೂ ಟಿಕೆಟ್ ನೀಡಬಾರದೆಂದು ಪಕ್ಷದ ಹೈಕಮಾಂಡ್ ಕೂಡ ಖಡಕ್ ಆಗಿ ಸೂಚನೆ ನೀಡಿದೆ ಎನ್ನಲಾಗಿದೆ.

ಈಗಾಗಲೇ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್, ರಾಜ್ಯ ಬಿಜೆಪಿ ಅಧ್ಯಕ್ಷ  ವಿನಯ್ ಸಹಸ್ರಬುದ್ಧೆ ಹಾಗೂ ಕಾರ್ಯಕಾರಿಣಿ ಪ್ರಧಾನ ಕಾರ್ಯದರ್ಶಿ ಸುಹಾಸ್ ಭಗತ್ ಅವರು ಅರ್ಹತೆ, ಮಾನದಂಡ ಆಧರಿಸಿ ಗೆಲ್ಲುವ ಅಭ್ಯರ್ಥಿಗಳ ಟಿಕೆಟ್ ನೀಡುವ ಪಟ್ಟಿ ತಯಾರಿಸಿದ್ದಾರೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು