ಕೇರಳದಲ್ಲಿ ಭಾಗವತ್ ಧ್ವಜ ವಿವಾದ; ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿ ಧ್ವಜಾರೋಹಣ

Published : Aug 15, 2017, 03:57 PM ISTUpdated : Apr 11, 2018, 12:38 PM IST
ಕೇರಳದಲ್ಲಿ ಭಾಗವತ್ ಧ್ವಜ ವಿವಾದ; ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿ ಧ್ವಜಾರೋಹಣ

ಸಾರಾಂಶ

ಆರ್’ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗೆ ಧ್ವಜಾರೋಹಣ ಮಾಡಲು ಅವಕಾಶ ನೀಡಬೇಡಿ ಎಂದು ಜಿಲ್ಲಾಧಿಕಾರಿ ಆದೇಶ ನೀಡಿದ್ದರೂ ಪಲಕ್ಕಡ್ ಜಿಲ್ಲೆಯ ಶಾಲೆಯೊಂದರಲ್ಲಿ ಮೋಹನ್ ಭಾಗವತ್ ತ್ರಿವರ್ಣ ಧ್ವಜವನ್ನು ಹಾರಿಸಿದ್ದಾರೆ.

ತಿರುವನಂತಪುರಂ (ಆ.15): ಆರ್’ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗೆ ಧ್ವಜಾರೋಹಣ ಮಾಡಲು ಅವಕಾಶ ನೀಡಬೇಡಿ ಎಂದು ಜಿಲ್ಲಾಧಿಕಾರಿ ಆದೇಶ ನೀಡಿದ್ದರೂ ಪಲಕ್ಕಡ್ ಜಿಲ್ಲೆಯ ಶಾಲೆಯೊಂದರಲ್ಲಿ ಮೋಹನ್ ಭಾಗವತ್ ತ್ರಿವರ್ಣ ಧ್ವಜವನ್ನು ಹಾರಿಸಿದ್ದಾರೆ.

ಪಲಕ್ಕಡ್ ಜಿಲ್ಲೆಯ ಕರ್ನಕಿ ಅಮ್ಮನ್ ಸರ್ಕಾರಿ ಅನುದಾನಿತ ಶಾಲೆಯಲ್ಲಿ ಮೋಹನ್ ಭಾಗವತ್ ಇಂದು ಧ್ವಜಾ ರೋಹಣ ಮಾಡಿದ್ದಾರೆ. ಸರ್ಕಾರಿ ಅನುದಾನಿತ ಶಾಲೆಯಲ್ಲಿ ಧ್ವಜಾರೋಹಣ ಮಾಡಲು ಜನಪ್ರತಿನಿಧಿಗಳು ಅಥವಾ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾತ್ರ ಅವಕಾಶ ನೀಡಿ. ರಾಜಕೀಯ ಮುಖಂಡರೊಬ್ಬರಿಗೆ ಧ್ವಜಾರೋಹಣ ಮಾಡಲು ಬಿಡುವುದು ಸರಿಯಲ್ಲ ಎಂದು ಜಿಲ್ಲಾಧಿಕಾರಿ ಮೇರಿ ಕುಟ್ಟಿ ಆದೇಶ ನೀಡಿದ್ದರು. ಆದರೂ ಶಾಲೆಯವರು ಮೋಹನ್ ಭಾಗವತ್'ಗೆ ಅವಕಾಶ ನೀಡಿದ್ದು,  ಇಂದು ಕರ್ನಕಿ ಅಮ್ಮನ್ ಶಾಲೆಯಲ್ಲಿ ಧ್ವಜ ಹಾರಿಸಿದ್ದಾರೆ.

ಜಿಲ್ಲಾಧಿಕಾರಿ ಪೊಲೀಸರಿಗೆ ಪತ್ರ ಬರೆದಿದ್ದು, ಭಾಗವತ್ ಮೇಲೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದಾರೆ.

ಸರ್ಕಾರದ ಆದೇಶವನ್ನು ನಾವು ಉಲ್ಲಂಘಿಸಿಲ್ಲ. ಆದೇಶದಂತೆ ಪ್ರಾಂಶುಪಾಲರು ಹಾಗೂ ಶಾಲಾ ಸಿಬ್ಬಂದಿ ಸಮ್ಮುಖದಲ್ಲಿ ಸಾರ್ವಜನಿಕ ವ್ಯಕ್ತಿಯೊಬ್ಬರು ಧ್ವಜಾರೋಹಣ ಮಾಡಬೇಕೆಂದು ಹೇಳಲಾಗಿತ್ತು. ಅದೇ ರೀತಿ ನಾವು ಮೋಹನ್ ಭಾಗವತ್’ಗೆ ಅವಕಾಶ ನೀಡಿದೆವು ಎಂದು ಶಾಲೆಯ ಆಡಳಿತ ಮಂಡಳಿ ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತುಂಗಭದ್ರಾ ಜಲಾಶಯದ ಕ್ರಸ್ಟ್‌ಡ್ ಗೇಟ್‌ ಅಳವಡಿಕೆ ಹಿನ್ನೆಲೆ, 6 ತಿಂಗಳು ಕಾಲುವೆಗಳಿಗೆ ನೀರು ಸ್ಥಗಿತ!
KPTCL ಕೆಲಸ, ಶನಿವಾರ ಬೆಂಗಳೂರಲ್ಲಿ ಕರೆಂಟ್‌ ಇರಲ್ಲ..!