
ಪಣಜಿ: ಸಾರ್ವಜನಿಕವಾಗಿ ರಾಜ್ಯ ಬಿಜೆಪಿ ಸರ್ಕಾರ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಆರ್‌ಎಸ್‌ಎಸ್ ಗೋವಾ ಮುಖ್ಯಸ್ಥ ಸುಭಾಷ್ ವೆಲಿಂಗ್ಕರ್ ಅವರನ್ನು ವಜಾ ಮಾಡಲಾಗಿದೆ. ‘‘ವೆಲಿಂಗ್ಕರ್ ಅವರನ್ನು ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಲಾಗಿದೆ. ಸಂಘದ ಕಾರ್ಯಕರ್ತರಾಗಿದ್ದುಕೊಂಡು ಈ ರೀತಿಯ ಚಟುವಟಿಕೆಗಳಲ್ಲಿ ಭಾಗಿಯಾಗುವಂತಿಲ್ಲ. ಅವರಿಗೆ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗುವ ಹಂಬಲವಿರಬಹುದು,’’ ಎಂದು ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಮನಮೋಹನ್ ವೈದ್ಯ ಹೇಳಿದ್ದಾರೆ.
ಸ್ಥಳೀಯ ಭಾಷೆಗಳನ್ನು ಶಾಲಾ ಸೂಚನಾ ಮಾಧ್ಯಮವಾಗಿ ಮಾಡುತ್ತೇವೆಂದು ನೀಡಿದ್ದ ವಾಗ್ದಾನ ಬಿಜೆಪಿ ಪೂರೈಸದೆ ನಂಬಿಕೆದ್ರೋಹವೆಸಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಜಯ ಸಾಧಿಸುವುದಿಲ್ಲ ಎಂದಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಲಕ್ಷ್ಮಿ ಪರ್ಸೇಕರ್, ‘‘ವೆಲಿಂಗ್ಕರ್ ಅವರನ್ನು ವಜಾಗೊಳಿಸಿರುವುದು ಆರ್‌ಎಸ್‌ಎಸ್ ಆಂತರಿಕ ಅಂಶವಾಗಿದ್ದು, ಅದಕ್ಕೂ ಬಿಜೆಪಿಗೂ ಸಂಬಂಧವಿಲ್ಲ,’’ ಎಂದಿದ್ದಾರೆ.
ಪಿಟಿಐ ವರದಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.