
ನಾಗಪುರ (ಅ.11): ಬರೋಬ್ಬರಿ 91 ವರ್ಷಗಳ ಬಳಿಕ ಆರೆಸ್ಸೆಸ್ ತನ್ನ ಸಮವಸ್ತ್ರವನ್ನು ಬದಲಾಯಿಸಿದೆ. ಖಾಕಿ ಚೆಡ್ಡಿ ಬದಲಿಗೆ ಕಂದು ಪ್ಯಾಂಟ್ ಬಳಸಲು ಆರಂಭಿಸಿದೆ.
ಮಹಾರಾಷ್ಟ್ರದ ನಾಗಪುರದಲ್ಲಿ ನಡೆದ ವಿಜಯದಶಮಿ ಸಮಾರಂಭದಲ್ಲಿ ಆರೆಸ್ಸೆಸ್ ಕಾರ್ಯಕರ್ತರು ನೂತನ ಸಮವಸ್ತ್ರ ಧರಿಸಿ ಪಥಸಂಚಲನ ನಡೆಸಿದ್ದಾರೆ. ವೇದಿಕೆ ಮೇಲೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿ ಹಲವು ನಾಯಕರು ನೂತನ ಪ್ಯಾಂಟ್ ಧರಿಸಿ ಭಾಗಿಯಾಗಿದ್ದರು.
ಕೇಂದ್ರ ಸಚಿವ ನಿತಿನ್ ಘಡ್ಕರಿ ಹಾಗೂ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಕೂಡಾ ಹೊಸ ಸಮವಸ್ತ್ರ ಧರಿಸಿ ಪಥಸಂಚಲನದಲ್ಲಿ ಭಾಗವಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.