
ಬೆಂಗಳೂರು(ಅ.27): ಅಂತೂ ಇಂತೂ ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನವೀದ್, ನಜೀರ್ ಮತ್ತು ಮಜರ್ ಬಂಧಿತ ಆರೋಪಿಗಳು. ಕೊಲೆಯ ಪ್ರಮುಖ ಸೂತ್ರಧಾರ, 4ನೇ ಆರೋಪಿಗಾಗಿ ಪೊಲೀಸರ ಹುಡುಕಾಟ ನಡೆಸಿದ್ದಾರೆ. ರುದ್ರೇಶ್ ಕೊಲೆಗೆ ಸೈದ್ಧಾಂತಿಕ ಕಾರಣವೇ ಹೊರತು ವೈಯಕ್ತಿಕ ದ್ವೇಷವಲ್ಲ ಎಂಬ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.
CLICK HERE.. ನನ್ನ ಗಂಡನಿಗೆ ಬಂದ ಸ್ಥಿತಿ ಬೇರಾರಿಗೂ ಬರಬಾರದು - ರುದ್ರೇಶ್ ಪತ್ನಿ
ರುದ್ರೇಶ್ ಕೊಲೆ ಆರೋಪಿಗಳೆಲ್ಲ SDPI(ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ) ಎಂಬ ರಾಜಕೀಯ ಪಕ್ಷದ ಸದಸ್ಯರು. SDPI ಕೇರಳದಲ್ಲಿ ಪ್ರಭಾವಿ ಪ್ರಾದೇಶಿಕ ಪಕ್ಷವಾಗಿದ್ದು, ಮಂಗಳೂರು,ಬೆಂಗಳೂರು, ಮೈಸೂರು, ಮಡಿಕೇರಿಯಲ್ಲೂ ಪಕ್ಷದ ಘಟಕಗಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.