
ಬೆಂಗಳೂರು(ಅ.16): ನಗರದಲ್ಲಿ ಆರ್'ಎಸ್'ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಯ ಕಾವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಳೆ ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಮರ್ಷಿಯಲ್ ಸ್ಟ್ರೀಟ್, ಶಿವಾಜಿ ನಗರ, ಫ್ರೇಜರ್ ಟೌನ್, ಭಾರತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯಿರುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಮೇಘರಿಕ್ ತಿಳಿಸಿದ್ದಾರೆ. ಸಿಸಿಬಿ ಸೇರಿದಂತೆ ಒಟ್ಟು 5 ತಂಡಗಳಿಂದ ಪ್ರಕರಣದ ತನಿಖೆ ನಡೆಸಲಾಗುತ್ತಿದ್ದು, ಕೊಲೆ ಆರೋಪಿಗಳನ್ನು ಶೀಘ್ರವೇ ಬಂಧಿಸುತ್ತೇವೆ. ಸಾರ್ವಜನಿಕರು ಶಾಂತಿ ಕಾಪಾಡಬೇಕು ಎಂದು ಆಯುಕ್ತ ಮೇಘರಿಕ್ ಮನವಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.