
ಬೆಂಗಳೂರು(ನ.17): ನಗರದಲ್ಲಿ ನಡೆದಿದ್ದ ರಿಯಲ್ ಎಸ್ಟೇಟ್ ಉದ್ಯಮಿ, ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣ ಭೇದಿಸಿದ ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹರಿಶೇಖರನ್ ನೇತೃತ್ವದ ತನಿಖಾ ತಂಡಗಳಿಗೆ ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಖ್ ಒಟ್ಟು 10 ಲಕ್ಷ ನಗದು ಬಹುಮಾನ ಘೋಷಿಸಿದ್ದಾರೆ.
ಅಕ್ಟೋಬರ್ 16ರಂದು ಕಾಮರಾಜ ರಸ್ತೆಯಲ್ಲಿ ದುಷ್ಕರ್ಮಿಗಳು ಹಾಡಹಗಲೆ ರುದ್ರೇಶ್ ಅವರನ್ನು ಮಾರಕಾಸದಿಂದ ಹಲ್ಲೆ ಮಾಡಿ ಕೊಲೆಗೈದು ಪರಾರಿಯಾಗಿದ್ದರು. ಆರೋಪಿಗಳ ಬಂಧನಕ್ಕೆ 5 ತನಿಖಾ ತಂಡಗಳನ್ನು ರಚಿಸಲಾಗಿತ್ತು. ಹೆಚ್ಚುವರಿ ಪೊಲೀಸ್ ಆಯುಕ್ತ ಹರಿಶೇಖರನ್ ನೇತೃತ್ವದಲ್ಲಿ ಈಶಾನ್ಯ ವಿಭಾಗದ ಡಿಸಿಪಿ ಹರ್ಷ ಮತ್ತು ಪೂರ್ವ ವಿಭಾಗದ ಡಿಸಿಪಿ ಸತೀಶ್‌ಕುಮಾರ್ ಸೇರಿದಂತೆ 25 ಮಂದಿ ಪೊಲೀಸ್ ಸಿಬ್ಬಂದಿಯ 5 ತಂಡ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಸುವಲ್ಲಿ ಯಶಸ್ವಿಯಾಗಿತ್ತು.
‘ತನಿಖಾ ತಂಡಗಳಿಗೆ ಬಹುಮಾನ ಘೋಷಿಸಿರುವುದು ತುಂಬ ಸಂತಸ ತಂದಿದೆ. ಆರೋಪಿಗಳನ್ನು ಬಂಸುವಲ್ಲಿ 5 ತನಿಖಾ ತಂಡದವರು ಹಗಲಿರುಳು ಶ್ರಮಿಸಿದ್ದಾರೆ. ಈ ಮೆಚ್ಚುಗೆ ಪ್ರತಿಯೊಬ್ಬ ಸಿಬ್ಬಂದಿಗೂ ಸಲ್ಲುತ್ತದೆ. ಇಂತಹ ಮೆಚ್ಚುಗೆ, ಬಹುಮಾನಗಳು ನಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ’ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಹರಿಶೇಖರನ್ ಸುವರ್ಣ ನ್ಯೂಸ್ ಸೋದರ ಪತ್ರಿಕೆ ‘ಕನ್ನಡಪ್ರಭ’ಕ್ಕೆ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.