
ಜೈಪುರ್(ಡಿ.13): ಅಶೋಕ್ ಗ್ಲೆಹೊಟ್ ರಾಜಸ್ಥಾನದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ವರದಿಗಳಿಂದ ರಾಜಸ್ಥಾನದ ಕೌರಲಿಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ.
ಸಚಿನ್ ಪೈಲೆಟ್ ಬೆಂಬಲಿಗರು ಹಿಂಸಾಚಾರದಲ್ಲಿ ನಿರತರಾಗಿದ್ದು, ಶಾಂತಿ ಕಾಪಾಡುವಂತೆ ಸಚಿನ್ ಪೈಲೆಟ್ ಬೆಂಬಲಿಗರಲ್ಲಿ ಮನವಿ ಮಾಡಿದ್ದಾರೆ. ನಾಯಕತ್ವದಲ್ಲಿ ನಂಬಿಕೆ ಹೊಂದಿದ್ದು, ರಾಹುಲ್ ಗಾಂಧಿ, ಸೋನಿಯಾಗಾಂಧಿ ನಿರ್ಧಾರವನ್ನು ಸ್ವಾಗತಿಸುವುದಾಗಿ ಪೈಲೆಟ್ ಸ್ಪಷ್ಟಪಡಿಸಿದ್ದಾರೆ.
ರಾಜಸ್ಥಾನದ ಮುಖ್ಯಮಂತ್ರಿ ಆಕಾಂಕ್ಷಿಗಳಾದ ಅಶೋಕ್ ಗೆಹ್ಲೋಟ್ , ಸಚಿನ್ ಪೈಲಟ್ ಹಾಗೂ ಮಧ್ಯಪ್ರದೇಶದ ಕಮಲ್ ನಾಥ್, ಜ್ಯೋತಿರಾಧಿತ್ಯ ಸಿಂದಿಯಾ ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆ ಸಂಬಂಧ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಯುಪಿಎ ಅಧಿನಾಯಕಿ ಸೋನಿಯಾಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಸಹ ಪಾಲ್ಗೊಂಡಿದ್ದರು.
ಮೂರು ರಾಜ್ಯಗಳ ನೂತನ ಚುನಾಯಿತ ಜನಪ್ರತಿನಿಧಿಗಳಿಂದ ಅಭಿಪ್ರಾಯ ಸಂಗ್ರಹಿಸಿದ ಕೇಂದ್ರ ವೀಕ್ಷಕರರನ್ನು ಭೇಟಿ ಮಾಡಿದ ರಾಹುಲ್ ಗಾಂಧಿ , ಸೋನಿಯಾಗಾಂಧಿ ಮುಖ್ಯಮಂತ್ರಿ ಆಯ್ಕೆ ಸಂಬಂಧ ಚರ್ಚೆ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.