Sadhguru Jaggi Vasudev: ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಅಗತ್ಯ: ಸದ್ಗುರು ಜಗ್ಗಿ ವಾಸುದೇವ್ ಆಗ್ರಹ

Published : Apr 23, 2025, 03:24 PM ISTUpdated : Apr 23, 2025, 03:52 PM IST
Sadhguru Jaggi Vasudev: ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಅಗತ್ಯ: ಸದ್ಗುರು ಜಗ್ಗಿ ವಾಸುದೇವ್ ಆಗ್ರಹ

ಸಾರಾಂಶ

ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದು ೨೭ ಜನರು ಮೃತಪಟ್ಟು, ೨೦ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಲಷ್ಕರ್-ಎ-ತೊಯ್ಬಾ ಸಂಘಟನೆಯ TRF ದಾಳಿಯ ಹೊಣೆ ಹೊತ್ತುಕೊಂಡಿದೆ. ಸದ್ಗುರುಗಳು ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮಕ್ಕೆ, ದೀರ್ಘಾವಧಿ ಪರಿಹಾರಗಳಿಗೆ, ರಾಷ್ಟ್ರೀಯ ಒಗ್ಗಟ್ಟಿಗೆ ಕರೆ ನೀಡಿದ್ದಾರೆ. ಪ್ರವಾಸಿಗರನ್ನು ಗುರಿಯಾಗಿಸಿದ ಈ ದಾಳಿಯಲ್ಲಿ ಕರ್ನಾಟಕದ ಮೂವರು ಸೇರಿದ್ದಾರೆ. ದಾಳಿಕೋರರ ಸ್ಕೆಚ್ ಬಿಡುಗಡೆಯಾಗಿದೆ. ಪಾಕಿಸ್ತಾನ ತನ್ನ ಪಾತ್ರವನ್ನು ನಿರಾಕರಿಸಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ದಾಳಿ ನಡೆದಿದೆ. ಅದರಲ್ಲಿ 27 ಜನರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಲಷ್ಕರ್-ಎ-ತೊಯ್ಬಾ ಸಂಘಟನೆಯ ಒಂದು ಭಾಗವಾದ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಈ ದುರಂತದ ಬಗ್ಗೆ ಸದ್ಗುರು ಜಗ್ಗಿ ವಾಸುದೇವ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಜಗ್ಗಿ ವಾಸುದೇವ್ ಅವರ ಪ್ರತಿಕ್ರಿಯೆ: 'ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಅಗತ್ಯ'..
ಸದ್ಗುರು ಜಗ್ಗಿ ವಾಸುದೇವ್ ಅವರು X ನಲ್ಲಿ ಬರೆದುಕೊಂಡಿದ್ದಾರೆ - ಭಯೋತ್ಪಾದನೆಯ ಉದ್ದೇಶ ಯುದ್ಧವಲ್ಲ, ಆದರೆ ಸಮಾಜವನ್ನು ಭಯದಿಂದ ಪಾರ್ಶ್ವವಾಯುವಿಗೆ ತಳ್ಳುವುದು. ದೇಶದ ಸಾರ್ವಭೌಮತೆಯನ್ನು ಕಾಪಾಡಿಕೊಳ್ಳಬೇಕಾದರೆ, ಈ ಭಯೋತ್ಪಾದಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ದೀರ್ಘಾವಧಿಯ ಪರಿಹಾರಗಳನ್ನು ಕಂಡುಕೊಳ್ಳಬೇಕು.

Pahalgam attack victims: ಪಹಲ್ಗಾಂ ಸಂತ್ರಸ್ತರನ್ನ ಭೇಟಿಯಾದ ಅಮಿತಾ ಶಾ; ಭಾವುಕ ಕ್ಷಣದ ಫೋಟೋಗಳು

ಶಿಕ್ಷಣ, ಆರ್ಥಿಕ ಅವಕಾಶಗಳು, ಸಂಪತ್ತು ಮತ್ತು ಯೋಗಕ್ಷೇಮವನ್ನು ಎಲ್ಲಾ ಹಂತಗಳಲ್ಲಿ ಹೆಚ್ಚು ಹಂಚಿಕೆ ಮಾಡಬೇಕು. ಧರ್ಮ, ಜಾತಿ, ಪಂಥಗಳ ಕಿರಿದಾದ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಂದು ರಾಷ್ಟ್ರವಾಗಿ ಒಗ್ಗಟ್ಟಿನಿಂದ ನಿಲ್ಲಬೇಕು. ನಮ್ಮ ಭದ್ರತಾ ಪಡೆಗಳಿಗೆ ಅವರ ಕರ್ತವ್ಯಗಳನ್ನು ನಿರ್ವಹಿಸಲು ಸಹಾಯ ಮಾಡಬೇಕು. ಮೃತರಿಗೆ ಮತ್ತು ಗಾಯಾಳುಗಳಿಗೆ ನಮ್ಮ ಸಂತಾಪಗಳು.

ಸದ್ಯ ಈ ದಾಳಿಯ ಬಗ್ಗೆ ಇಡೀ ವಿಶ್ವವೇ ಕಳವಳ ವ್ಯಕ್ತಪಡಿಸುತ್ತಿದೆ. ಕಾರಣ, ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ. ಎಲ್ಲೆಲ್ಲಿಂದಲೋ ಬಂದಿರುವ ಟೂರಿಸ್ಟ್ ಈ ದಾಳಿಯಿಂದ ಸಾವನ್ನಪ್ಪಿದ್ದಾರೆ. ಇಷ್ಟು ದಿನವೂ ಜಮ್ಮ-ಕಾಶ್ಮೀರದ ಸ್ಥಳೀಯರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದ ಉಗ್ರರು ಇದೀಗ ಪ್ರವಾಸಿಗರನ್ನು ಟಾರ್ಗೆಟ್ ಮಾಡಿದ್ದಾರೆ. ಕರ್ನಾಟಕದ 3 ಪ್ರವಾಸಿಗರೂ ಸೇರಿದಂತೆ, ಒಟ್ಟೂ 27 ಜನರು ಈ ದಾಳಿಯಲ್ಲಿ ಮೃತರಾಗಿದ್ದಾರೆ. 

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಇಂಟಲಿಜೆನ್ಸ್ ವೈಫಲ್ಯ? ಗೃಹ ಸಚಿವ ಪರಮೇಶ್ವರ ಆಕ್ರೋಶ

ದಾಳಿಕೋರರ ಸ್ಕೆಚ್ ಬಿಡುಗಡೆ
ಭದ್ರತಾ ಸಂಸ್ಥೆಗಳು ದಾಳಿಕೋರರ ಸ್ಕೆಚ್‌ಗಳನ್ನು ಬಿಡುಗಡೆ ಮಾಡಿದ್ದು, ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಎಂದು ಗುರುತಿಸಲಾಗಿದೆ. ಈ ದಾಳಿಯ ರೂವಾರಿ ಪಾಕಿಸ್ತಾನದ ಲಷ್ಕರ್-ಎ-ತೊಯ್ಬಾ ಉಪ ಮುಖ್ಯಸ್ಥ ಸೈಫುಲ್ಲಾ ಖಾಲಿದ್ ಎಂದು ಗುಪ್ತಚರ ಮೂಲಗಳು ತಿಳಿಸಿವೆ.

ಪಾಕಿಸ್ತಾನದ ನಿರಾಕರಣೆ
ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್, ಪಹಲ್ಗಾಮ್ ದಾಳಿಯಲ್ಲಿ ಪಾಕಿಸ್ತಾನದ ಯಾವುದೇ ಪಾತ್ರವಿಲ್ಲ ಎಂದು ಹೇಳಿದ್ದಾರೆ. 2019 ರ ಪುಲ್ವಾಮಾ ದಾಳಿಯ ನಂತರ ಇದುವರೆಗಿನ ಅತಿದೊಡ್ಡ ಭಯೋತ್ಪಾದಕ ದಾಳಿ ಇದಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮೆಹಂದಿ ಗಿಡ ಪೂಜಿಸಿದರೆ ಇಷ್ಟೆಲ್ಲಾ ಲಾಭವಿದೆಯೇ?: ಪೂಜೆಗೆ ಇದೇ ಸರಿಯಾದ ದಿನ!
Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!