ಜೈಲಿಗೆ ಹೋಗಿ ರೇಪ್‌ ಆರೋಪಿಗೆ ಥ್ಯಾಂಕ್ಸ್‌ ಹೇಳಿದ ಸಾಕ್ಷಿ!

Published : Jun 06, 2019, 07:40 AM IST
ಜೈಲಿಗೆ ಹೋಗಿ ರೇಪ್‌ ಆರೋಪಿಗೆ ಥ್ಯಾಂಕ್ಸ್‌ ಹೇಳಿದ ಸಾಕ್ಷಿ!

ಸಾರಾಂಶ

ಉತ್ತರಪ್ರದೇಶದ ಉನ್ನಾವ್‌ ಲೋಕಸಭಾ ಕ್ಷೇತ್ರದಿಂದ ಪುನರಾಯ್ಕೆಯಾಗಿರುವ ಬಿಜೆಪಿ ಸಂಸದ| ಪುನರಾಯ್ಕೆ ಆಗಿದ್ದಕ್ಕೆ ಜೈಲಿಗೆ ಹೋಗಿ ರೇಪ್‌ ಆರೋಪಿಗೆ ಥ್ಯಾಂಕ್ಸ್‌ ಹೇಳಿದ ಸಾಕ್ಷಿ!| 

ಉನ್ನಾವ್‌[ಜೂ.06]: ಉತ್ತರಪ್ರದೇಶದ ಉನ್ನಾವ್‌ ಲೋಕಸಭಾ ಕ್ಷೇತ್ರದಿಂದ ಪುನರಾಯ್ಕೆಯಾಗಿರುವ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್‌ ಅವರು ತಮ್ಮ ಗೆಲುವಿನಲ್ಲಿ ಪಾತ್ರ ವಹಿಸಿದ, ಅತ್ಯಾಚಾರ ಆರೋಪದ ಮೇಲೆ ಜೈಲಿನಲ್ಲಿರುವ ಶಾಸಕರೊಬ್ಬರನ್ನು ಜೈಲಿನಲ್ಲೇ ಭೇಟಿ ಮಾಡಿದ್ದಾರೆ.

ಮತ್ತೊಮ್ಮೆ ಲೋಕಸಭೆಗೆ ಆಯ್ಕೆಯಾಗಲು ಸಹಕಾರ ನೀಡಿದ್ದಕ್ಕಾಗಿ ಧನ್ಯವಾದ ಹೇಳಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ.

ಉದ್ಯೋಗ ಕೇಳಿಕೊಂಡು ತನ್ನ ಮನೆಗೆ ಬಂದಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಉತ್ತರಪ್ರದೇಶದ ಬಿಜೆಪಿ ಶಾಸಕ ಕುಲದೀಪ್‌ ಸಿಂಗ್‌ ಸೆಂಗರ್‌ 2017ರ ಜೂನ್‌ನಲ್ಲಿ ಅತ್ಯಾಚಾರವೆಸಗಿದ್ದ. ಈ ಕುರಿತು ಸಂತ್ರಸ್ತೆ ದೂರು ನೀಡಿದಾಗ ಪೊಲೀಸರು ಶಾಸಕನನ್ನು ಬಂಧಿಸುವ ಬದಲು, ಸಂತ್ರಸ್ತೆಯ ತಂದೆಯನ್ನೇ ಅರೆಸ್ಟ್‌ ಮಾಡಿ, ಕಿರುಕುಳ ನೀಡಿದ್ದರು. ಆ ವ್ಯಕ್ತಿ ಮೃತಪಟ್ಟಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ತಮಿಳು ಚಿತ್ರದಲ್ಲಿ ಕನ್ನಡ ಹಾಡು ಬಳಸಿದ್ದಕ್ಕೆ ದಂಡ, ಒಟಿಟಿ ರಿಲೀಸ್‌ಗೂ ಮುನ್ನ 30 ಲಕ್ಷ ಠೇವಣಿ ಇಡಿ ಎಂದ ಕೋರ್ಟ್‌!