ಮಾರಾಟ, ಹೂಡಿಕೆದಾರ ಸಮಾವೇಶ ನವೆಂಬರ್’ಗೆ

Published : Aug 24, 2017, 01:24 PM ISTUpdated : Apr 11, 2018, 12:54 PM IST
ಮಾರಾಟ, ಹೂಡಿಕೆದಾರ ಸಮಾವೇಶ ನವೆಂಬರ್’ಗೆ

ಸಾರಾಂಶ

ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ (MSME) ಮಾರುಕಟ್ಟೆ ಸೇವೆಯನ್ನು ಒದಗಿಸುವ ಉದ್ದೇಶದಿಂದ ಬರುವ ನ. 23 ಮತ್ತು 24 ರಂದು ರಾಷ್ಟ್ರೀಯ ಮಾರಾಟಗಾರರ ಮತ್ತು ಬಂಡವಾಳ  ಹೂಡಿಕೆದಾರರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ  ಕೈಗಾರಿಕೆ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.

ಬೆಂಗಳೂರು: ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ (MSME) ಮಾರುಕಟ್ಟೆ ಸೇವೆಯನ್ನು ಒದಗಿಸುವ ಉದ್ದೇಶದಿಂದ ಬರುವ ನ. 23 ಮತ್ತು 24 ರಂದು ರಾಷ್ಟ್ರೀಯ ಮಾರಾಟಗಾರರ ಮತ್ತು ಬಂಡವಾಳ  ಹೂಡಿಕೆದಾರರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ  ಕೈಗಾರಿಕೆ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.

ಈ ಸಮಾವೇಶ ಎಂಎಸ್ಎಂಇ ಮತ್ತು ಬೃಹತ್ ಕೈಗಾರಿಕೆಗಳನ್ನು ಒಂದೆಡೆ ತರಲಿದೆ. ಸಮಾವೆಶದಲ್ಲಿ ಭಾಗವಹಿಸುವ  ಸಂಸ್ಥೆಗಳಿಗೆ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡುವ ಅವಕಾಶ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ. ಸಮಾವೇಶದ ಅಂಗವಾಗಿ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ದೇಶದ ವಿವಿಧ ಭಾಗದಲ್ಲಿ ರೋಡ್ ಶೋ ಹಮ್ಮಿಕೊಳ್ಳಲಾಗುವುದೆಂದು ದೇಶಪಾಂಡೆ ಹೇಳಿದ್ದಾರೆ.

ಹೊಸ ನೀತಿ: ಬೆಂಗಳೂರನ್ನು ವಿದ್ಯುತ್ ವಾಹನಗಳ ರಾಜಧಾನಿಯಾಗಿ  ಮತ್ತು ರಾಜ್ಯವನ್ನು ಪರಿಸರ ಸ್ನೇಹಿ ಮಾಡಲು ಸರ್ಕಾರ ‘ನೂತನ ವಿದ್ಯುತ್ ವಾಹನ, ಇಂಧನ ಸಂಗ್ರಹಣಾ ನೀತಿ’ಯನ್ನು ರೂಪಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯಕ್ಕೆ ಮೊದಲ ಸ್ಥಾನ: ಪ್ರಸಕ್ತ ವರ್ಷದ ಜೂನ್’ವರೆಗೆ ರಾಜ್ಯದಲ್ಲಿ 1.40, 683 ಕೋಟಿ ರೂ. ಬಂಡವಾಳ ಹೂಡಿಕೆ ಉದ್ದೇಶ ಹೊಂದಿ ಮೊದಲ ಸ್ಥಾನ ಪಡೆದುಕೊಂಡಿದೆ.  2013ರಲ್ಲಿ ಕರ್ನಾಟಕ 11ನೇ ಸ್ಥಾನದಲ್ಲಿತ್ತು ಎಂದು ದೇಶಪಾಂಡೆ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಘರ್ಷದ ಸಮಾಜಕ್ಕೆ ಧ್ಯಾನವೇ ಪರಿಹಾರ: ಶ್ರೀ ಶ್ರೀ ರವಿಶಂಕರ್ ಗುರೂಜಿ
ಭಾರತ ವಿರೋಧಿ ತೀವ್ರಗಾಮಿ ನಾಯಕನ ಹತ್ಯೆಯ ನಂತರ ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ