ಭಾರತೀಯ ಸೇನೆಯ ಕಾರ್ಯಾಚರಣೆಗೆ ರಾಹುಲ್ ಗಾಂಧಿ ಸಲಾಂ

By Web DeskFirst Published Feb 26, 2019, 10:08 AM IST
Highlights

ಪಾಕ್ ಗಡಿ ನಿಯಂತ್ರಣಾ ರೇಖೆ ದಾಟಿ ಉಗ್ರರ ನೆಲೆಯನ್ನು ಭಾರತೀಯ ವಾಯುಪಡೆ ಧ್ವಂಸಗೊಳಿಸಿರುವ ಬೆನ್ನಲ್ಲೇ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ವಾಯುಪಡೆಗೆ ಸಲಾಂ ಎಂದಿದ್ದಾರೆ.

ನವದೆಹಲಿ[ಫೆ.26]: ಭಾರತೀಯ ವಾಯುಸೇನೆಯು ಗಡಿ ನಿಯಂತ್ರಣಾ ರೇಖೆ ದಾಟಿ ಉಗ್ರರ ಕ್ಯಾಂಪ್ ಗಳ ಮೇಲೆ ದಾಳಿ ನಡೆಸಿದ್ದು, ಪುಲ್ವಾಮಾ ದಾಳಿಗೆ ಭಾರತ ಪ್ರತೀಕಾರ ಪಡೆದುಕೊಂಡಿದೆ. ಹೀಗಿರುವಾಗ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಭಾರತೀಯ ಸೇನೆಯ ವಾಯುಪಡೆಗೆ ಸಲಾಂ ಎಂದಿದ್ದಾರೆ.

🇮🇳 I salute the pilots of the IAF. 🇮🇳

— Rahul Gandhi (@RahulGandhi)

ಉಗ್ರರ ಅಡಗು ತಾಣಗಳ ಮೇಲೆ ದಾಳಿ ನಡೆಸಿರುವ ಕುರಿತಾಗಿ ರಾಹುಲ್ ಗಾಂಧಿ ಟ್ವೀಟ್ ಮಾಡಿ 'ಭಾರತೀಯ ವಾಯುಸೇನೆಯ ಪೈಲಟ್ ಗಳಿಗೆ ನನ್ನ ಸಲಾಂ' ಎಂದಿದ್ದಾರೆ. ಈ ಮೂಲಕ ಭಾರತೀಯ ಸೇನೆಯ ದಾಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

click me!