
ಲಕ್ನೋ[ಅ.03]: ಅಕ್ಟೋಬರ್ 2ರಂದು ದೇಶಾದ್ಯಂತ ಮಹಾತ್ಮ ಗಾಂಧಿ ಜನ್ಮ ಜಯಂತಿಯನ್ನು ಸ್ವಚ್ಛತೆ, ಪ್ಲಾಸ್ಟಿಕ್ ವಿರೋಧಿ ಅಭಿಯಾನ, ಪಾದಯಾತ್ರೆ ಹೀಗೆ ವಿಭಿನ್ನವಾಗಿ ಆಚರಿಸಲಾಯ್ತು. ಆದರೆ ಈಆಚರಣೆಯಲ್ಲಿ ಸಮಾಜವಾದಿ ಪಕ್ಷದ ನಾಯಕ ಫಿರೋಜ್ ಖಾನ್ ಹಾಗೂ ಆತನ ಬೆಂಬಲಿಗರು ಈ ವಿಚಾರದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ನಾಯಕನ ವಿಡಿಯೋ ಒಂದು ಭಾರೀ ವೈರಲ್ ಆಗಿದ್ದು, ನಗೆಪಾಟಲಿಗೀಡಾಗಿದ್ದಾರೆ.
ಹೌದು ಉತ್ತರಪ್ರದೇಶದ ಗಾಂಧಿ ಪ್ರತಿಮೆಯೊಂದರ ಬಳಿ ಸಮಾಜವಾದಿ ಪಕ್ಷದ ಜಿಲ್ಲಾ ಅಧ್ಯಕ್ಷ ಫಿರೋಜ್ ಖಾನ್ ಹಗೂ ಆತನ ಬೆಂಬಲಿಗರು ಕಣ್ಣೀರಿಟ್ಟಿದ್ದಾರೆ. ಅಷ್ಟೇ ಅಲ್ಲದೇ 'ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ನೀವು ಯಾಕಷ್ಟು ಬೇಗ ನಮ್ಮನ್ನು ಅಗಲಿದಿರಿ' ಎಂದೂ ದೂರಿದ್ದಾರೆ.
ಈ ವಿಡಿಯೋವನ್ನು ಶೇರ್ ಮಾಡಿಕೊಂಡಿರುವ ವ್ಯಕ್ತಿಯೊಬ್ಬರು 'ಜನಪ್ರಿಯರಾಗಲು ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ವಿಚಿತ್ರ ನಾಟಕವಾಡಿದ್ದಾರೆ' ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಫೇಮಸ್ ಆಗಲು ಹೊರಟ ನಾಯಕ, ಸದ್ಯ ಮುಜುಗರಕ್ಕೀಡಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.