ಚುನಾವಣೆಯಲ್ಲಿ ತೇಜಸ್ವಿ ಸೂರ‍್ಯ ಗೆಲುವಿಗೆ ಕಾರಣವೇ ಇವರು

Published : Jun 07, 2019, 08:19 AM IST
ಚುನಾವಣೆಯಲ್ಲಿ ತೇಜಸ್ವಿ ಸೂರ‍್ಯ ಗೆಲುವಿಗೆ ಕಾರಣವೇ ಇವರು

ಸಾರಾಂಶ

ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ತೇಜಸ್ವಿ ಸೂರ್ಯ ಅವರಿಗೆ ಇವರ ಬೆಂಬಲವು ಅತ್ಯಂತ ಪ್ರಮುಖ ಪಾತ್ರ ವಹಿಸಿತ್ತು ಎನ್ನಲಾಗಿದೆ. 

 ಬೊಮ್ಮನಹಳ್ಳಿ: ಲೋಕಸಭಾ ಚುನಾವಣೆ ವೇಳೆ ಸಮರ್ಥನಂ ಟ್ರಸ್ಟ್‌ ನೀಡಿದ ಬೆಂಬಲ, ವಹಿಸಿದ ಶ್ರಮದಿಂದ ನನ್ನ ಗೆಲುವು ಸಾಧ್ಯವಾಯಿತು ಎಂದು ಸಂಸದ ತೇಜಸ್ವಿ ಸೂರ‍್ಯ ತಿಳಿಸಿದರು.

ಎಚ್‌ಎಸ್‌ಆರ್‌ನ ಸಮರ್ಥಂ ಟ್ರಸ್ಟ್‌ನಲ್ಲಿ ನಡೆದ ಕಾರ‍್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಚುನಾವಣೆಗೆ ಸ್ಪರ್ಧಿಸಲು ಅವಕಾಶ ಒದಗಿ ಬಂತು. ಹೇಗೆ ಕಾರ್ಯ ಪ್ರಾರಂಭಿಸಲಿ, ಎಲ್ಲಿಂದ ಚಾಲನೆ ಕೊಡಲಿ ಎಂಬ ಗೊಂದಲದಲ್ಲಿದ್ದಾಗ ಸಮರ್ಥಂ ಟ್ರಸ್ಟ್‌ನ ಮಹಂತೇಶ್‌ ಅವರು ನನ್ನನ್ನು ಭೇಟಿಯಾಗಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಾದ್ಯಂತ ಸುಮಾರು 5 ಲಕ್ಷಕ್ಕೂ ಅಧಿಕ ಮತದಾರರ ಡೇಟಾ ತಮ್ಮಲ್ಲಿದೆ. 
150ಕ್ಕೂ ಅಧಿಕ ಮಂದಿ ನಮ್ಮ ಸಮರ್ಥನಂ ಟ್ರಸ್ಟ್‌ನ ಉದ್ಯೋಗಿಗಳು ಕಾಲ್‌ಸೆಂಟರ್‌ನಲ್ಲಿ ಉದ್ಯೋಗದಲ್ಲಿದ್ದಾರೆ. ನಾವು ಒಟ್ಟಾಗಿ ನಿಮ್ಮ ಗೆಲುವಿಗೆ ಶ್ರಮಿಸುವುದಾಗಿ ಸಾಥ್‌ ನೀಡಿದರು ಎಂದು ಸ್ಮರಿಸಿದರು. 

ತೇಜಸ್ವಿ ಅವರು ನ್ಯಾಷನಲ್‌ ಕಾಲೇಜಿನಲ್ಲಿ ಓದುವಾಗ ಅವರಿಗೆ ಗುರುಗಳಾಗಿದ್ದ ಗೀತಾ ರಾಮಾನುಜಂ ಅವರು ಸಂಸದರನ್ನು ಸನ್ಮಾನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜನ್ಮ ದಿನದಲ್ಲಿ ಒಮ್ಮೆಯಾದ್ರೂ ಸಂಖ್ಯೆ 1 ಇದ್ಯಾ? ಹಾಗಿದ್ದರೆ ಅದೃಷ್ಟ ನಿಮ್ಮ ಮನೆ ಬಾಗಿಲಿಗೆ- ಎಷ್ಟು ಬಾರಿ ಇದ್ದರೆ ಏನು ಫಲ?
ಅತಿಹೆಚ್ಚು ಮದ್ಯಪಾನ ಮಾಡುವ ಜಗತ್ತಿನ ಸೈನ್ಯ ಯಾವುದು? ಭಾರತದ ಸೇನೆಗೆ ಎಷ್ಟನೇ ಸ್ಥಾನ?