
ನೆಲಮಂಗಲ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬರುವುದಿಲ್ಲ. ಆದರೆ, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ.
ಅದೇ ರೀತಿ ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೂಡ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ತಾಲೂಕಿನ ಅರ್ಜುನ ಬೆಟ್ಟಹಳ್ಳಿಯ ಶ್ರೀ ಪರಿಪೂರ್ಣ ಸನಾತನ ಮಠದ ಶ್ರೀನಿವಾಸ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಶುಕ್ರವಾರ ಸಂಜೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಠಕ್ಕೆ ಭೇಟಿ ನೀಡಿದಾಗ ಆಶೀರ್ವದಿಸಿ ಈ ಭವಿಷ್ಯ ಹೇಳಿದರು.
2019ರ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟಬಹುಮತ ಬರುವುದಿಲ್ಲ. ಆದರೆ 2019ರ ಚುನಾವಣೆ ನಂತರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ. ರಾಜ್ಯದಲ್ಲಿ ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಇದೇ ವೇಳೆ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ