
ಬೆಂಗಳೂರು : ಸ್ಯಾಂಡಲ್ ವುಡ್ ನಟ, ನಿರ್ದೇಶಕರ ಮೆನಗಳ ಮೇಲೆ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ಮಾಡಿ ಶಾಕ್ ನೀಡಿದ್ದಾರೆ. ಇದೇ ವೇಳೆ ನಟರ ಅಭಿಮಾನಿಗಳು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಟ ಯಶ್, ಸುದೀಪ್, ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ನಿವಾಸಗಳಿಗೆ ದಾಳಿ ಮಾಡಿದ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಕೆಜಿಎಫ್ ನಿರ್ಮಾಪಕ ವಿಜಯ್ ಕಿರಗಂದೂರು ಹಾಗೂ ವಿಲನ್ ಚಿತ್ರದ ನಿರ್ಮಾಪಕ ಸಿ.ಆರ್.ಮನೋಹರ್ ನಿವಾಸ ಸೇರಿದಂತೆ ಸುಮಾರು 60 ಕಡೆ ಆದಾಯ ತೆರಿಗೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಈ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಟರ ಅಭಿಮಾನಿಗಳು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ನೆಚ್ಚಿನ ನಟರನ್ನು ಟಾರ್ಗೆಟ್ ಮಾಡಿ ದಾಳಿ ಮಾಡಿಸಿದ್ದೀರಿ. ಕರ್ನಾಟಕವನ್ನೇ ಹಾಟ್ ಸ್ಪಾಟ್ ಮಾಡಿಕೊಂಡಿದ್ದೀರಿ ಎಂದು ಆರೋಪಿಸಿದ್ದಾರೆ.
ದೇಶದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ಈ ದಾಳಿಯ ಎಫೆಕ್ಟ್ ಮೋದಿ ಮೇಲಾಗಲಿದೆ. ಚುನಾವಣೆಯಲ್ಲಿ ನಿಮ್ಮನ್ನು ಟಾರ್ಗೆಟ್ ಮಾಡುತ್ತೇವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.