
ಬೆಂಗಳೂರು(ಮೇ.26): ಕ್ರಾಂತಿಕಾರಿ ಯೋಜನೆಗಳ ಮೂಲಕವೇ ಎಲ್ಲರ ಗಮನ ಸೆಳೆದಿರುವ ಭಾರತೀಯ ರೈಲ್ವೆ ಮತ್ತೊಂದು ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಹೊಸ ಶೌಚಾಲಯ ನೀತಿ ಜಾರಿಗೆ ತಂದಿರುವ ಇಲಾಖೆ, ದೇಶದ ಎಲ್ಲ ರೈಲು ನಿಲ್ದಾಣಗಳಲ್ಲಿ ಕಡಿಮೆ ಬೆಲೆಯ ಸ್ಯಾನಿಟರಿ ಪ್ಯಾಡ್ ಮತ್ತು ಕಾಂಡೋಮ್ ಗಳ ಪೂರೈಕೆಗೆ ಒಪ್ಪಿಗೆ ನೀಡಿದೆ.
ದೇಶದ ಎಲ್ಲ ರೈಲು ನಿಲ್ದಾಣಗಳಲ್ಲಿ ಮಹಿಳೆ ಮತ್ತು ಪುರುಷರಿಗೆ ಹಾಗೂ ವಿಕಲ ಚೇತನರಿಗೆ ಪ್ರತ್ಯೇಕ ಶೌಚಾಲಯ ನಿರ್ಮಾಣ ಕಾರ್ಯಕ್ಕೂ ಇಲಾಖೆ ಮುಂದಾಗಿದೆ. ವಿಶೇಷವಾಗಿ ಮಹಿಳೆಯರಿಗೆಗಾಗಿ ಕಡಿಮೆ ಬೆಲೆಯ ಸ್ಯಾನಿಟರಿ ಪ್ಯಾಡ್ ಪೂರೈಕೆಗೂ ಸೈ ಎಂದಿದೆ. ನಿಲ್ದಾಣದ ಒಳಗೂ ಮತ್ತು ಹೊರಗೂ ಒಂದೊಂದು ಶೌಚಾಲಯ ನಿರ್ಮಿಸುವ ಯೋಜನೆ ಸಿದ್ದಗೊಂಡಿದ್ದು, ಇದರಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಸ್ಯಾನಿಟರಿ ಪ್ಯಾಡ್ ಮತ್ತು ಕಾಂಡೋಮ್ ಪುರೈಸಲಾಗುವುದು.
ಕೇವಲ ಪ್ರಯಾಣಿಕರಷ್ಟೇ ಅಲ್ಲದೇ ರೈಲು ನಿಲ್ದಾಣದ ಸುತ್ತಮುತ್ತ ವಾಸಿಸುವ ಜನರೂ ಕೂಡ ಈ ಶೌಚಾಲಯ ಉಪಯೋಗ ಮಾಡಬಹುದಾಗಿದೆ. ಇನ್ನು ಶೌಚಾಲಯದ ನಿರ್ವಹಣೆಗಾಗಿ ಖಾಸಗಿ ಎನ್ ಜಿಓ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.