
ಫಝಿಲ್ಕ: ಭಯೋತ್ಪಾದನೆ, ಗೂಢಚರ್ಯೆ ಪ್ರಕರಣದಲ್ಲಿ ಬಂಧಿತನಾಗಿ, ಮೂರು ವರ್ಷದ ಹಿಂದೆ ಪಾಕಿಸ್ತಾನದ ಜೈಲಿನಲ್ಲಿ ಸಾವಿಗೀಡಾದ ಸರಬ್ಜಿತ್ ಸಿಂಗ್ ಅವರ ಸಹೋದರಿ ದಲ್ಬೀರ್ ಕೌರ್ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
‘‘ಬಿಜೆಪಿ ಕಿಸಾನ್ ಮೋರ್ಚಾ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಮತ್ತು ಸಚಿವ ಸುರ್ಜಿತ್ ಜ್ಯಾನಿ ಸಮ್ಮುಖದಲ್ಲಿ ದಲ್ಬೀರ್ ಕೌರ್ ಬಿಜೆಪಿಗೆ ಸೇರ್ಪಡೆಗೊಂಡರು,’’ ಎಂದು ಪಂಜಾಬ್ ಕಿಸಾನ್ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗುರ್ವಿಂದರ್ ಸಿಂಗ್ ಹೇಳಿದ್ದಾರೆ.
ಈ ಹಿಂದೆ, ದಲ್ಬೀರ್ ಕೌರ್ ಅಕಾಲಿದಳದಲ್ಲಿದ್ದು, ನಂತರ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು. ಇದೀಗ, ತಾವು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿರುವುದಾಗಿ ಸ್ವತಃ ಕೌರ್ ಅವರೇ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.