
ಬೆಂಗಳೂರು(ಆ.24): ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ಪರಪ್ಪನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನು‘ವಿಸುತ್ತಿರುವ ಎಐಎಡಿಎಂಕೆ ಪಕ್ಷದ ನಾಯಕಿ ಶಶಿಕಲಾ ನಟರಾಜನ್ ಜೈಲಿನಿಂದ ಹೊರಹೋಗಿ ಹೊಸೂರಿನಲ್ಲಿನ ಪಕ್ಷದ ಶಾಸಕರೊಬ್ಬರ ಮನೆಗೆ ಭೇಟಿ ನೀಡಿರುವ ಸಾಧ್ಯತೆ ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಡಿ.ರೂಪಾ ಅವರು ಶಂಕೆ ವ್ಯಕ್ತಪಡಿಸಿದ್ದಾರೆ.
ಬಂಧೀಖಾನೆ ಇಲಾಖೆಯ ಹಿಂದಿನ ಡಿಐಜಿ ಡಿ.ರೂಪಾ ಅವರು ಎಸಿಬಿಗೆ ಸಲ್ಲಿಸಿರುವ ವರದಿಯಲ್ಲಿ ಈ ವಿಷಯ ಬಹಿರಂಗಗೊಂಡಿದೆ. ಇದೇ ತಿಂಗಳ 19ರಂದು ಎಸಿಬಿಗೆ 10 ಪುಟಗಳ ವರದಿ ಸಲ್ಲಿಕೆಯಾಗಿದ್ದು, ವರದಿಯಲ್ಲಿ ಈ ಅಂಶವನ್ನು ಉಲ್ಲೇಖಿಸಿದ್ದಾರೆ. ಶಶಿಕಲಾ ಅವರು ಜೈಲಿನಿಂದ ಕೆಲವೇ ಕಿ.ಮೀ. ದೂರದಲ್ಲಿರುವ ಹೊಸೂರು ಪಕ್ಷದ ಶಾಸಕರೊಬ್ಬರ ನಿವಾಸಕ್ಕೆ ತೆರಳಿದ್ದಾರೆ. ಅಲ್ಲಿ ಆತಿಥ್ಯ ಪಡೆದು ಮತ್ತೆ ಜೈಲಿಗೆ ಮರಳಿದ್ದಾರೆ. ಈ ದೃಶ್ಯಗಳು ಜೈಲಿನ 1 ಮತ್ತು 2ನೇ ಗೇಟ್‌ನಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಬೇಕು ಎಂದು ಎಸಿಬಿಗೆ ಬರೆದ ವರದಿಯಲ್ಲಿ ತಿಳಿಸಲಾಗಿದೆ.
ಜೈಲಿನ 1 ಮತ್ತು 2ನೇ ಗೇಟ್‌ನಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಾವಳಿಯ ನಾಲ್ಕು ವಿಡಿಯೋ ತುಣುಕುಗಳನ್ನು ಸಹ ಎಸಿಬಿಗೆ ಸಲ್ಲಿಕೆ ಮಾಡಲಾಗಿದೆ. ಈ ಪೈಕಿ ಒಂದು ವಿಡಿಯೋದಲ್ಲಿ ಶಶಿಕಲಾ ಅವರು ಮಣ್ಣಿನ ಬಣ್ಣದ ಚೂಢಿದಾರ್ ಧರಿಸಿದ್ದು, ಇಳವರಿಸಿ ಕಿತ್ತಳೆ ಬಣ್ಣದ ಸೀರೆ ಧರಿಸಿದ್ದಾರೆ. ಹೊರಗಡೆಯಿಂದ ಜೈಲಿಗೆ ಪ್ರವೇಶಿಸುತ್ತಿರುವ ದೃಶ್ಯದಲ್ಲಿ ಬ್ಯಾಗ್‌ವೊಂದು ಇದೆ. ಶಾಪಿಂಗ್‌ಗೆ ಹೋಗಿರುವ ಸಾಧ್ಯತೆ ಇದೆ. ವಿಡಿಯೋದಲ್ಲಿ ಜೈಲು ಅಧೀಕ್ಷಕಿ ಅನಿತಾ ಅವರು ಇವರನ್ನು ಕರೆತರುತ್ತಿದ್ದಾರೆ ಎಂದು ತಿಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.