
ಬೆಂಗಳೂರು(ಫೆ.15): ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು ಶಿಕ್ಷೆ ಪ್ರಕಟವಾದ ಹಿನ್ನೆಲೆಯಲ್ಲಿ ಚೆನ್ನೈನಿಂದ ಬೆಂಗಳೂರಿಗೆ ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರದ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಶಶಿಕಲಾ ನಟರಾಜನ್ ಹಾಗೂ ಇನ್ನಿಬ್ಬರು ಅಪರಾಧಿಗಳನ್ನು ಪೊಲೀಸರು ಹಾಜರು ಪಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ತಡರಾತ್ರಿ ಎಸಿಪಿ ಸೂರ್ಯನಾರಾಯಣ ನೇತೃತ್ವದಲ್ಲಿ ಭದ್ರತೆ ಕುರಿತಾಗಿ ಸಭೆ ನಡೆಸಲಾಗಿದೆ.
ಕೋರ್ಟ್ ಕೊಠಡಿ ಸಂಖ್ಯೆ 48ರಲ್ಲಿ ಮೂವರನ್ನು ಹಾಜರುಪಡಿಸಲಿರುವ ಪೊಲೀಸರು ತದ ನಂತರ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋಗಲಾಗುತ್ತದೆ. ಶಶಿಕಲಾ ಆಗಮಿಸುವ ಕಾರಣ ಜೈಲಿನ ಸುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಶಶಿಕಲಾ ನಟರಾಜನ್ ಅಪರಾಧಿ ಅಂತ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ತೀರ್ಪು ಪ್ರಕಟಿಸಿದೆ. ನ್ಯಾಯಮೂರ್ತಿಗಳಾದ ಪಿ.ಸಿ. ಘೋಷ್ ಮತ್ತು ಅಮಿತ್ ರಾಯ್ ಅವರ ವಿಭಾಗೀಯ ಪೀಠ ಶಶಿಕಲಾ, ಇಳವರಸಿ ಹಾಗೂ ಸುಧಾಕರನ್ ಅವರಿಗೆ ತಲಾ 4 ವರ್ಷ ಜೈಲು ಶಿಕ್ಷೆ ಹಾಗೂ 10 ಕೋಟಿ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.