
ಬೆಳಗಾವಿ[ಜೂ.12]: ಮಂತ್ರಿ ಸ್ಥಾನ ಸಿಗದೆ ಬೇಸರಗೊಂಡು ಬಹಿರಂಗವಾಗಿಯೇ ಅತೃಪ್ತಿ ವ್ಯಕ್ತಪಡಿಸಿದ್ದ ಯಮಕನಕರಡಿ ಶಾಸಕ ಸತೀಶ್ ಜಾರಕಿಹೊಳಿ ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ಕೊನೆಗೂ ರಾಜೀನಾಮೆ ನೀಡಿದ್ದಾರೆ.
ಕೆಪಿಸಿಸಿ ಹಾಗೂ ಎಐಸಿಸಿಗೆ ನಿನ್ನೆ ಸಂಜೆಯೇ ರಾಜೀನಾಮೆ ಪತ್ರ ರವಾನಿಸಿರುವ ಅವರು ಶೀಘ್ರದಲ್ಲಿಯೇ ದೆಹಲಿಗೆ ತೆರಳುವುದಾಗಿ ತಿಳಿಸಿದ್ದಾರೆ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಕೊನೆ ಸಮಯದಲ್ಲಿ ಸತೀಶ್ ಜಾರಕಿಹೊಳಿ ಅವರ ಹೆಸರು ಕೈತಪ್ಪಿ ಸತೀಶ್ ಬದಲು ರಮೇಶ್ ಜಾರಕಿಹೊಳಿಗೆ ಮಂತ್ರಿ ಸ್ಥಾನ ನೀಡಲಾಗಿತ್ತು.
ತಮ್ಮ ನಾಯಕನಿಗೆ ಸಚಿವಸ್ಥಾನ ನೀಡದ ಕಾರಣ ಸತೀಶ್ ನೂರಾರು ಬೆಂಬಲಿಗರು ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಿದ್ದರು. ಆರಂಭದಲ್ಲಿ ಅತೃಪ್ತ ಶಾಸಕ ಎಂ.ಬಿ.ಪಾಟೀಲ್ ಬಣದಲ್ಲಿ ಗುರುತಿಸಿಕೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.