
ರಿಯಾದ್(ಅ.19): ಸೌದಿ ರಾಷ್ಟ್ರಗಳಲ್ಲಿ ಕಾನೂನು ಎಷ್ಟು ಕಠಿಣವಾಗಿದೆ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಅದು ಅಲ್ಲಿನ ಆಳುವ ಕುಟುಂಬ ವರ್ಗಕ್ಕೂ ಅನ್ವಯವಾಗುತ್ತೆ. ಯಾರೊಬ್ಬರೂ ಕಾನೂನಿನಿಂದ ಹೊರತಲ್ಲ ಎಂಬುದು ಇದೀಗ ಸಾಬೀತಾಗಿದೆ. ಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥನೆಂದು ಸಾಬೀತಾದ ಹಿನ್ನೆಲೆಯಲ್ಲಿ ರಾಜಕುಮಾರನಿಗೇ ಗಲ್ಲು ಶಿಕ್ಷೆ ವಿಧಿಸಿರುವ ಘಟನೆ ರಿಯಾದ್`ನಲ್ಲಿ ನಡೆದಿದೆ.
ಗಲಭೆಯೊಂದರಲ್ಲಿ ಅದೆಲ್ ಅಲ್ ಮೊಹಮ್ಮದ್ ಎಂಬಾತನನ್ನ ಗುಂಡಿಕ್ಕಿ ಕೊಂದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ರಾಜಕುಮಾರ್ ಟುರ್ಕಿ ಬಿನ್ ಸೌದ್ ಅಲ್ ಕಬೀರ್`ಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಸಾಮಾನ್ಯವಾಗಿ ಗಲ್ಲು ಶಿಕ್ಷೆಗೆ ಗುರಿಯಾದವರ ತಲೆಯನ್ನ ಕತ್ತಿಯನ್ನ ಕತ್ತರಿಸಲಾಗುತ್ತೆ. ಆದರೆ, ರಾಜಕುಮಾರನನ್ನ ಯಾವ ರೀತಿ ಶಿಕ್ಷೆಗೆ ಗುರಿಪಡಿಸಲಾಗಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.