ಮಧ್ಯಮ ಯುಗದ ಕ್ರೂರತೆ ಅಂತ್ಯ: ಪ್ರಧಾನಿ ಮೋದಿ!

Published : Jul 30, 2019, 09:47 PM IST
ಮಧ್ಯಮ ಯುಗದ ಕ್ರೂರತೆ ಅಂತ್ಯ: ಪ್ರಧಾನಿ ಮೋದಿ!

ಸಾರಾಂಶ

ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆಗೆ ಅಂಗೀಕಾರ| ಟ್ವೀಟ್ ಮೂಲಕ ಸಂತಸ ಹಂಚಿಕೊಂಡ ಪ್ರಧಾನಿ ಮೋದಿ| ‘ಮಧ್ಯಮ ಯುಗದ ಕ್ರೂರ ಪದ್ದತಿಗೆ ಇಂದು ಇತೀಶ್ರಿ’| ಐತಿಹಾಸಿಕ ತಪ್ಪನ್ನು ಸರಿಪಡಿಸಲಾಗಿದೆ ಎಂದ ಪ್ರಧಾನಿ| ಮಸೂದೆ ಬೆಂಬಲಿಸಿದ ರಾಜಕೀಯ ಪಕ್ಷಗಳಿಗೆ ಮತ್ತು ಸಂಸದರಿಗೆ ಧನ್ಯವಾದ ಸಲ್ಲಿಸಿದ ಪ್ರಧಾನಿ ಮೋದಿ| 

ನವದೆಹಲಿ(ಜು.30): ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆಗೆ ಅಂಗೀಕಾರ ದೊರೆತ ಹಿನ್ನೆಲೆಯಲ್ಲಿ, ಪ್ರಧಾನಿ ಮೋದಿ ಟ್ವೀಟ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ.

ಮಧ್ಯಮ ಯುಗದ ಕ್ರೂರ ಪದ್ದತಿಗೆ ಇಂದು ಇತಿಶ್ರೀ ಹಾಡಲಾಗಿದ್ದು, ಮುಸ್ಲಿಂ ಸಹೋದರಿಯರಿಗೆ ನ್ಯಾಯ ಸಿಕ್ಕಿದೆ ಎಂದು ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

ಮುಸ್ಲಿಂ ಮಹಿಳೆಯರ ಮೇಲೆ ನಡೆಸಲಾಗುತ್ತಿದ್ದ ಐತಿಹಾಸಿಕ ದೌರ್ಜನ್ಯಕ್ಕೆ ಇಂದು ತೆರೆ ಬಿದ್ದಿದ್ದು, ಭಾರತ ಇಂದು ಸಂತೋಷವಾಗಿದೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಇದೇ ವೇಳೆ ತ್ರಿವಳಿ ತಲಾಖ್ ನಿಷೇಧ ಮಸೂದೆ ಬೆಂಬಲಿಸಿದ ಎಲ್ಲಾ ರಾಜಕೀಯ ಪಕ್ಷಗಳಿಗೆ ಮತ್ತು ಸಂಸದರಿಗೆ ಪ್ರಧಾನಿ ಮೋದಿ ಧನ್ಯವಾದ ಸಲ್ಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

666 operation Dream Theatre Teaser: ಶಿವರಾಜ್‌ಕುಮಾರ್-ಧನಂಜಯ್ '666 ಆಪರೇಶನ್ ಡ್ರೀಮ್ ಥಿಯೇಟರ್ ಟೀಸರ್' ಬಿಡುಗಡೆ; ಭಾರೀ ಹೈಪ್ ಸೃಷ್ಟಿ!
ಕೊಡಗಿನಲ್ಲಿ ಅವ್ಯವಸ್ಥೆ ಕಂಡು ಗರಂ ಆದ ಉಪ ಲೋಕಾಯುಕ್ತ: ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ