
ಬೆಂಗಳೂರು(ಎ.01): ಮೊನ್ನೆಯಷ್ಟೇ ನೂರು ವರ್ಷಗಳನ್ನು ಪೂರೈಸಿದ್ದ ದೇಶದ ಅತಿ ದೊಡ್ಡ ಬ್ಯಾಂಕ್, ಇಂದಿನಿಂದ SBI ಜೊತೆ ವಿಲೀನವಾಗಲಿದೆ. ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಇನ್ಮುಂದೆ ಎಸ್'ಬಿಐ ನೇತೃತ್ವದಲ್ಲಿ ಮುಂದುವರೆಯಲಿದೆ.
ರಾಜ್ಯದ ಬೃಹತ್ ಮತ್ತು ಹೆಮ್ಮೆಯ ಬ್ಯಾಂಕ್ ಆಗಿದ್ದ SBM, ಇಂದಿನಿಂದ SBI ಆಗಲಿದೆ. ಆದರೆ ಇದರಿಂದ ಗ್ರಾಹಕರಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಹಣದ ವಹಿವಾಟು, ವ್ಯವಹಾರಗಳೆಲ್ಲಾ ಎಂದಿನಂತೆ ಸಾಗಲಿದೆ. ಅಕೌಂಟ್ ನಂಬರ್, ಡೆಬಿಟ್ ಕಾರ್ಡ್ ನಂಬರ್, ಮತ್ತು ಎಲ್ಲಾ ರೀತಿಯ ಸೆಕ್ಯೂರಿಟಿ ಪಿನ್ ಸೇರಿದಂತೆ, ವ್ಯವಹಾರಿಕವಾಗಿ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ಉಭಯ ಬ್ಯಾಂಕ್'ಗಳ ಮ್ಯಾನೇಜರ್'ಗಳು ಸ್ಪಷ್ಟನೆ ನೀಡಿದ್ದಾರೆ.
ಕೇವಲ ಬ್ಯಾಂಕ್'ನ ಹೆಸರು ಮಾತ್ರ ಬಡಲಾಗುತ್ತಿದ್ದು, ಉಳಿದೆಲ್ಲಾ ಕಾರ್ಯವು ಎಂದಿನಂತೆ ನಡೆಯಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.