
ನವದೆಹಲಿ(ಡಿ.15): ಉತ್ತರ ಪ್ರದೇಶದ ಬುಲಂದ್'ಶಹರ್'ನಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಬೇಷರತ್ ಕ್ಷಮೆ ಯಾಚಿಸಿದ್ದು, ಅದನ್ನು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ.
ಜು.29ರಂದು ನೋಯ್ಡಾ ಮೂಲದ ಕುಟುಂಬ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಿಡಿಗೇಡಿಗಳ ಗುಂಪು ಗನ್ ಪಾಯಿಂಟ್'ನಲ್ಲಿ ತಾಯಿ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿತ್ತು.
ಈ ಘಟನೆಯ ಕುರಿತಂತೆ ಪ್ರತಿಕ್ರಿಯಿಸಿದ್ದ ಸಚಿವ ಅಜಂ ಖಾನ್ ಇದೊಂದು ರಾಜಕೀಯ ಪ್ರೇರಿತ ಘಟನೆ ಎಂದು ಹೇಳಿದ್ದರು. ಆ.29ರಂದು ಸುಪ್ರೀಂಕೋರ್ಟ್ ಸಚಿವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿತ್ತು.
ಅದರಂತೆ ನ.17ರಂದು ಸುಪ್ರೀಂಕೋರ್ಟ್ ಬೇಷರತ್ತಾಗಿ ಕ್ಷಮೆ ಯಾಚಿಸಬೇಕೆಂದು ಅವರಿಗೆ ತಾಕೀತು ಮಾಡಿತ್ತು.
ಮಾಜಿ ಸಚಿವ ಕಪಿಲ್ ಸಿಬಲ್ ಅವರು ಅಜಂ ಖಾನ್ ಪರ ವಕಾಲತ್ತು ವಹಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.