ಬಡ್ತಿ ಮೀಸಲಾತಿ ತೀರ್ಪಿನ ಮರುಪರಿಶೀಲನೆಗೆ ಸುಪ್ರೀಂ ಅಸ್ತು!

Published : Jul 26, 2019, 03:00 PM IST
ಬಡ್ತಿ ಮೀಸಲಾತಿ ತೀರ್ಪಿನ ಮರುಪರಿಶೀಲನೆಗೆ ಸುಪ್ರೀಂ ಅಸ್ತು!

ಸಾರಾಂಶ

ಬಡ್ತಿಯಲ್ಲಿ ಮೀಸಲಾತಿ ನಿರ್ಧಾರ ಎತ್ತಿ ಹಿಡಿದಿದ್ದ ಸುಪ್ರೀಂಕೋರ್ಟ್| ತೀರ್ಪಿನ ಪರಾಮರ್ಶೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ| ನ್ಯಾ. ಲಲಿತ್ ಮತ್ತು ನ್ಯಾ. ಚಂದ್ರಚೂಡ್ ನ್ಯಾಯಪೀಠದಿಂದ ವಿಚಾರಣೆ ಸಾಧ್ಯತೆ| ಮುಂಬರುವ ಸೋಮವಾರ(ಜು.29) ಅರ್ಜಿಯ ವಿಚಾರಣೆ ನಡೆಯಲಿದೆ.

ನವದೆಹಲಿ(ಜು.26): ಬಡ್ತಿಯಲ್ಲಿ ಮೀಸಲಾತಿಯನ್ನು ಎತ್ತಿ ಹಿಡಿದಿದ್ದ ಸುಪ್ರೀಂಕೋರ್ಟ್ ತೀರ್ಪಿನ ಪರಾಮರ್ಶೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸರ್ವೋಚ್ಛ ನ್ಯಾಯಾಲಯ ಕೈಗೆತ್ತಿಕೊಂಡಿದೆ.

ನ್ಯಾ. ಯು.ಯು ಲಲಿತ್ ನೇತೃತ್ವದ ನ್ಯಾಯ ಪೀಠದ ಮುಂದೆ ವಿಚಾರಣೆಗೆ ಬಂದಿದ್ದ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಪೀಠ, ವಿಚಾರಣೆಗೆ ಅಸ್ತು ಎಂದಿದೆ.

ಇನ್ನು ವಾರಾಂತ್ಯ ಇರುವುದರಿಂದ ಸೋಮವಾರ ಅರ್ಜಿಯ ವಿಚಾರಣೆ ನಡೆಯಲಿದ್ದು, ನ್ಯಾ. ಲಲಿತ್ ಮತ್ತು ನ್ಯಾ. ಚಂದ್ರಚೂಡ್ ನ್ಯಾಯಪೀಠ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡುವ ಸಂಬಂಧ, ರಾಜ್ಯ ಸರ್ಕಾರ ಕಳೆದ ವರ್ಷ ಜಾರಿಗೆ ತಂದಿದ್ದ ವಿವಾದಾತ್ಮಕ ಕಾಯ್ದೆಯನ್ನು ಸುಪ್ರೀಂ ಕೋರ್ಟ್‌ ಕಳೆದ ಮೇನಲ್ಲಿ ಮಾನ್ಯಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಧಾರವಾಡದ ಪೆಟ್ರೋಲ್ ಬಂಕ್‌ಗಳ ಮುಂದೆ ಮತ್ತೆ ನೋ ಸ್ಟಾಕ್ ಬೋರ್ಡ್; ಕೃತಕ ಅಭಾವ ಸೃಷ್ಟಿಯ ಆರೋಪ
ಪಾಕಿಸ್ತಾನ ಬಳಿ ಒಂದು ದಿನಕ್ಕೂ ಆಗುವಷ್ಟು ತೈಲ ದಾಸ್ತಾನು ಇಲ್ಲ! ಖುದ್ದು ಪಾಕ್‌ ತೈಲ ಸಚಿವನಿಂದ ದೇಶದ ದುಸ್ಥಿತಿ ಬಹಿರಂಗ