
ಮಂಗಳೂರು (ಡಿ.27): ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್ ಮೇಲೆ ಐಟಿ ಮತ್ತು ಜಾರಿ ನಿರ್ದೇಶನಾಲಯ ಹದ್ದಿನಕಣ್ಣು ಇಟ್ಟಿದೆ.
ನೋಟು ನಿಷೇಧದ ಬಳಿಕ ಕೆಲವೇ ದಿನಗಳಲ್ಲಿ ನೂರಾರು ಕೋಟಿ ವ್ಯವಹಾರ ನಡೆದಿರುವ ಬಗ್ಗೆ ಮಾಹಿತಿ ಕೋರಿ ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ ಪ್ರತ್ಯೇಕ ನೋಟೀಸ್ ಜಾರಿ ಮಾಡಿತ್ತು.
ಈ ಕುರಿತು ಕಳೆದ ಶುಕ್ರವಾರವೇ ಬ್ಯಾಂಕ್ ಅಧಿಕಾರಿಗಳು ಸಮಗ್ರ ಮಾಹಿತಿಯನ್ನು ಸಂಬಂಧಪಟ್ಟ ಇಲಾಖೆಗೆ ನೀಡಿದ್ದರು. ಆದರೂ ಇವತ್ತು ಐಟಿ ಮತ್ತು ಇಡಿ ಅಧಿಕಾರಿಗಳ ತಂಡ ಬ್ಯಾಂಕ್ನ ಕೇಂದ್ರ ಕಚೇರಿಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿತು.
ಜನ್’ಧನ್ ಖಾತೆ ಸೇರಿದಂತೆ ಅಕ್ರಮವಾಗಿ ವಹಿವಾಟು ನಡೆದಿರುವ ಖಾತೆಗಳ ವಿವರವನ್ನು ಅಧಿಕಾರಿಗಳು ಸಂಗ್ರಹಿಸಿದರು. ಈ ಭೇಟಿ ವೇಳೆ ಡಿಸಿಸಿ ಬ್ಯಾಂಕ್ ಅಧಿಕಾರಿಗಳು, ವ್ಯವಸಾಯ ಸೇವಾ ಸಂಘಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.