
ನವದೆಹಲಿ(ಜು.14): ಅನಿವಾಸಿ ಭಾರತೀಯರಿಗೆ ಮತದಾನದ ಹಕ್ಕನ್ನು ನೀಡುವ ಸಂಬಂಧ ಒಂದು ವಾರದಲ್ಲಿ ನಿರ್ಧರಿಸಿ ಎಂದು ಕೇಂದ್ರಕ್ಕೆ ಸೂಚನೆ ನೀಡಿದೆ.
ಕೇಂದ್ರ ಸರ್ಕಾರವು ಎನ್'ಆರ್'ಐಗಳಿಗೆ ಮತ ಚಲಾಯಿಸುವಂತೆ ಕಾನೂನು ರೂಪಿಸಲಿದೆಯೆ ಅಥವಾ ನಿಯಮಗಳನ್ನು ತಿದ್ದುಪಡಿ ಮಾಡಲಿದೆಯೇ ಎಂದು ವಿವರಣೆ ಕೇಳಿದೆ. ಈ ತಿಂಗಳ ಆರಂಭದಲ್ಲಿ ಚುನಾವಣಾ ಆಯೋಗವು 3 ತಿಂಗಳೊಳಗೆ ಕಾನೂನು ರಚಿಸದಿದ್ದರೆ ಮತದಾನದ ಹಕ್ಕನ್ನು ಪರಿಚಯಿಸುವ ಪ್ರಕ್ರಿಯೆಯನ್ನು ಹಿಂತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರಕ್ಕೆ ತಿಳಿಸಿತ್ತು.
ವಿಶ್ವದಾದ್ಯಂತ 1 ಕೋಟಿಗೂ ಹೆಚ್ಚು ಅನಿವಾಸಿ ಭಾರತೀಯರಿದ್ದು, ಈಗಾಗಲೇ 24,348 ಮಂದಿ ಚುನಾವಣೆಯಲ್ಲಿ ಅವಕಾಶ ನೀಡಿದರೆ ಬ್ಯಾಲೆಟ್ ಪತ್ರದಲ್ಲಿ ಮತ ಚಲಾಯಿಸಿ ಅಂಚೆ ಮೂಲಕ ಕಳಿಸುವ ಕೊಡುವ ಪ್ರಕ್ರಿಯೆಗೆ ಚುನಾವಣಾ ಆಯೋಗದಲ್ಲಿ ನೋಂದಾಯಿಸಿದ್ದಾರೆ.
ಈ ರೀತಿಯ ಕಾನೂನು ಜಾರಿಗೆ ಬಂದರೆ ಕೇರಳ, ಪಂಜಾಬ್ ಹಾಗೂ ತೆಲಂಗಾಣ ರಾಜ್ಯದ ಅನಿವಾಸಿ ಭಾರತೀಯರು ಹೆಚ್ಚಾಗಿದ್ದು, ಅವರು ಮತದಾನ ಮಾಡುವ ಅವಕಾಶ ಲಭ್ಯವಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.