ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ: ಕೇಂದ್ರಕ್ಕೆ ಸುಪ್ರೀಂ ನೋಟಿಸ್

Published : Aug 08, 2017, 02:39 PM ISTUpdated : Apr 11, 2018, 12:54 PM IST
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ: ಕೇಂದ್ರಕ್ಕೆ ಸುಪ್ರೀಂ ನೋಟಿಸ್

ಸಾರಾಂಶ

370ನೇ ಪರಿಚ್ಛೇದದ ಪ್ರಕಾರ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ಪರಿಚ್ಛೇದದ ಕಾಲಾವಧಿ ಮುಗಿದಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ನವದೆಹಲಿ: 370ನೇ ಪರಿಚ್ಛೇದದ ಪ್ರಕಾರ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ಪರಿಚ್ಛೇದದ ಕಾಲಾವಧಿ ಮುಗಿದಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕಿರುವ ಪ್ರತ್ಯೇಕ ಸಂವಿಧಾನವನ್ನು ಕಾನೂನುಬಾಹಿರವೆಂದು ಘೋಷಿಸಬೇಕೆಂದು ಅರ್ಜಿಯು ಸುಪ್ರೀಂಗೆ ಮನವಿ ಮಾಡಿದೆ.

ಅರ್ಜಿದಾರರ ವಾದವನ್ನು ಆಲಿಸಿದ ಸುಪ್ರೀಂ, ಕೇಂದ್ರಕ್ಕೆ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ಜಾರಿ ಮಾಡಿದೆ.

ಕಾಶ್ಮೀರ ಕಣಿವೆಯ ಸಂಸ್ಕೃತಿ ಹಾಗೂ ಪರಂಪರೆಯನ್ನು ಕಾಪಾಡಲು ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಅತ್ಯವಶ್ಯವೆಂದು ಮುಖ್ಯಮಂತ್ರಿ ಮಹೆಬೂಬಾ ಮುಫ್ತಿ ಇತ್ತೀಚೆಗೆ ಅಭಿಪ್ರಾಯ ವ್ಯಕ್ತಪಡಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

3 ವರ್ಷದ ರಾಜ್ಯ ಸರ್ಕಾರದ ಆಡಳಿತ ಸಂಪೂರ್ಣ ವಿಫಲ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಆರೋಪ
ಮನೆ ಬಿಟ್ಟು ಬಂದ ರೈತ, 'ಸಾಯುತ್ತೇನೆ' ಎಂದಿದ್ದ: ಕೊನೆಗೆ ಪೊಲೀಸರು ಮಾಡಿದ್ದು ಕೇಳಿದ್ರೆ ಅಚ್ಚರಿ ಪಡ್ತೀರಾ!