ಮೇವು ಹಗರಣ: ಲಾಲೂಗೆ ಜಾಮೀನು ನಿರಾಕರಿಸಿದ ಸುಪ್ರೀಂ!

Published : Apr 10, 2019, 01:29 PM IST
ಮೇವು ಹಗರಣ: ಲಾಲೂಗೆ ಜಾಮೀನು ನಿರಾಕರಿಸಿದ ಸುಪ್ರೀಂ!

ಸಾರಾಂಶ

ಬಹುಕೋಟಿ ಮೇವು ಹಗರಣದ ಪ್ರಕರಣ| ಲಾಲೂ ಪ್ರಸಾದ್ ಯಾದವ್ ಗೆ ಜಾಮೀನು ನಿರಾಕರಣೆ| ಜಾಮೀನು ಮಂಜೂರು ಮಾಡಲು ಸ್ಪಷ್ಟವಾಗಿ ನಿರಾಕರಿಸಿದ ಸುಪ್ರೀಂ ಕೋರ್ಟ್| ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾ. ರಂಜನ್ ಗಗೋಯ್ ನೇತೃತ್ವದ ಪೀಠ| ಲಾಲೂ ಪರ ಕಪಿಲ್ ಸಿಬಲ್ ವಾದ ಮಂಡನೆ| 

ನವದೆಹಲಿ(ಏ.10): ಬಹುಕೋಟಿ ಮೇವು ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರನ್ನೊಳಗೊಂಡ ನ್ಯಾಯುಪೀಠ,  ಲಾಲೂಗೆ ಜಾಮೀನು ನೀಡಲು ಸ್ಪಷ್ಟವಾಗಿ ನಿರಾಕರಿಸಿದೆ.

ಲಾಲೂ ಪರ ವಾದ ಮಂಡಿಸಿದ ವಕೀಲ್ ಕಪಿಲ್ ಸಿಬಲ್, ಪ್ರಕರಣ ಸಂಬಂಧ ಯಾವುದೇ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿಲ್ಲ, ಪಿತೂರಿಯಿಂದಾಗಿ ಅವರಿಗೆ ಜೈಲು ಶಿಕ್ಷೆಯಾಗಿದೆ ಎಂದು ಮನವರಿಕೆ ಮಾಡಲು ಪ್ರಯತ್ನಿಸಿದರು. 

 

ಆದರೆ ಸಿಬಲ್ ವಾದ ಒಪ್ಪದ ಕೋರ್ಟ್, ಜಾಮೀನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿತು. ನಿನ್ನೆಯಷ್ಟೇ ಲಾಲೂಗೆ ಜಾಮೀನು ನೀಡಕೂಡದು ಎಂದು ಸಿಬಿಐ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!