
ನವದೆಹಲಿ (ಜ.11): ಪ್ರಧಾನಿ ಮೋದಿ ಗುಜರಾತ್ ಸಿಎಂ ಆಗಿದ್ದಾಗ ಸಹರಾ ಬಿರ್ಲಾ ಡೈರಿಯಿಂದ ಲಂಚವನ್ನು ಸ್ವೀಕರಿಸಿದ್ದಾರೆನ್ನುವ ಆರೋಪದ ಬಗ್ಗೆ ತನಿಖೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಸಲ್ಲಿಸಿರುವ ದಾಖಲೆಗಳನ್ನು ಪರಿಶೀಲಿಸಿರುವ ಸರ್ವೋಚ್ಚ ನ್ಯಾಯಾಲಯ, ಈ ದಾಖಲೆಗಳು ನಂಬಲರ್ಹವಾಗಿಲ್ಲ. ಹಾಗಾಗಿ ಪ್ರಧಾನಿ ಸೇರಿದಂತೆ ಇತರರ ಮೇಲೆ ತನಿಖೆ ನಡೆಸುವಂತೆ ಹೇಳಲು ಸಾಧ್ಯವಿಲ್ಲ ಎಂದು ಹೇಳಿದೆ.
ಒಂದು ವೇಳೆ ಈ ದಾಖಲೆಗಳನ್ನು ಆಧರಿಸಿ ತನಿಖೆಗೆ ಆದೇಶಿಸಿದರೆ ಕಾನೂನನ್ನು ಸ್ವಾರ್ಥ ಸಾಧನೆಗೆ ದುರ್ಬಳಕೆ ಮಾಡಿಕೊಳ್ಳಲು ಅವಕಾಶ ನೀಡಿದಂತಾಗುತ್ತದೆ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ. ನ್ಯಾಯಾಲಯದ ತೀರ್ಪಿಗೆ ಪ್ರಶಾಂತ್ ಭೂಷಣ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
2013-14 ರಲ್ಲಿ ಎರಡು ಉದ್ಯಮಗಳ ಮೇಲೆ ಐಟಿ ದಾಳಿ ನಡೆದಿದ್ದು,ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರ ರಾಜಕಾರಣಿಗಳು ಆ ಕಾರ್ಪೋರೇಟ್ ಕಂಪನಿಗಳಿಂದ ಲಂಚ ಪಡೆದಿದ್ದರು. ಇದರ ಬಗ್ಗೆ ವಿಶೇಷ ತನಿಖಾ ತಂಡ (ಎಸ್ ಐಟಿ) ತನಿಖೆ ನಡೆಸುವಂತೆ ಕೋರಿ ಕಾಮನ್ ಕಾಸ್ ಎನ್ನುವ ಎನ್ ಜಿಓ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು.
ವಿಚಾರಣೆ ಕೈಗೆತ್ತಿಕೊಂಡ ಸರ್ವೋಚ್ಚ ನ್ಯಾಯಾಲಯ ಪ್ರಧಾನಿ ವಿರುದ್ಧ ತನಿಖೆಗೆ ಆದೇಶಿಸಲು ನಿರಾಕರಿಸಿದೆ. ಇದು ಕಾಂಗ್ರೆಸ್ ಗೆ ಹಿನ್ನೆಡೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.