ರಫೆಲ್ ಮರುಪರಿಶೀಲನಾ ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ!

By Web DeskFirst Published May 10, 2019, 7:17 PM IST
Highlights

ರಫೆಲ್ ಮರುಪರಿಶೀಲನಾ ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್| ರಫೆಲ್ ಒಪ್ಪಂದ ಪ್ರಕರಣದ ಬಗ್ಗೆ ಕ್ರಿಮಿನಲ್ ತನಿಖೆ ನಡೆಸಲು ಕೋರಿ ಸಲ್ಲಿಸಿದ್ದ ಅರ್ಜಿ| ಯಶ್ವಂತ್ ಸಿನ್ಹಾ, ಅರುಣ್ ಶೌರಿ, ಪ್ರಶಾಂತ್ ಭೂಷಣ್ ಸಲ್ಲಿಸಿದ್ದ ಅರ್ಜಿ|

ನವದೆಹಲಿ(ಮೇ.10): ರಫೆಲ್ ಒಪ್ಪಂದ ಪ್ರಕರಣದ ಬಗ್ಗೆ ಕ್ರಿಮಿನಲ್ ತನಿಖೆ ನಡೆಸಬೇಕೆಂಬ ಮರುಪರಿಶೀಲನಾ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.

ಈ ಹಿಂದೆ ಮಾಜಿ ಕೇಂದ್ರ ಸಚಿವ ಯಶ್ವಂತ್ ಸಿನ್ಹಾ, ಅರುಣ್ ಶೌರಿ, ವಕೀಲ ಪ್ರಶಾಂತ್ ಭೂಷಣ್ ರಫೆಲ್ ಒಪ್ಪಂದದ ಕುರಿತು ತನಿಖೆ ನಡೆಸಬೇಕೆಂದು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿತ್ತು. 

Supreme Court reserves order on Rafale review petitions against its December 14, 2018 judgement upholding the 36 Rafale jets' deal. pic.twitter.com/b9gC4s0qCp

— ANI (@ANI)

ಇದೀಗ ಈ ತೀರ್ಪಿನ ಮರುಪರಿಶೀಲಿನಾ ಅರ್ಜಿಯ ತೀರ್ಪನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ.

Supreme Court reserves the order on the contempt petition filed by BJP MP Meenakashi Lekhi, against Rahul Gandhi for attributing his 'Chowkidar chor hai' comment to Supreme Court. pic.twitter.com/XeHgIf8CIf

— ANI (@ANI)

ಈ ಮಧ್ಯೆ ಸುಪ್ರೀಂಕೋರ್ಟ್ ಆದೇಶವನ್ನು ತಪ್ಪಾಗಿ ಉಲ್ಲೇಖಿಸಿ ನ್ಯಾಯಾಂಗ ನಿಂದನೆಗೆ ಗುರಿಯಾಗಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಕೂಡ ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.

click me!