
ನವದೆಹಲಿ (ಅ.26): ರಾಜಕೀಯ ಪಕ್ಷವೊಂದರ ಕೋಮು ಕಾರ್ಯರ್ಸೂಚಿಯು, ಆ ಪಕ್ಷದ ಅಭ್ಯರ್ಥಿಯ ಕಾರ್ಯಸೂಚಿಯನ್ನಾಗಿ ಪರಿಗಣಿಸಬಹುದೋ ಇಲ್ಲವೋ ಎಂಬ ವಾದವನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಈ ವಿಚಾರವು ಕೋರ್ಟ್’ನ 7 ಮಂದಿ ಸದಸ್ಯರ ಸಾಂವಿಧಾನಿಕ ಪೀಠದ ಮುಂದೆ ಬಂದಿಲ್ಲ, ಹಾಗಾಗಿ ಅದರ ವಿಚಾರಣೆ ನಡೆಸುವುದಿಲ್ಲ ಎಂದು ಮುಖ್ಯ ನ್ಯಾಯಾಧೀಶ ಟಿ.ಎಸ್.ಠಾಕೂರ್ ಹೇಳಿದ್ದಾರೆ.
ರಾಜಕೀಯ ಪಕ್ಷವೊಂದರ ಕೋಮು ಕಾರ್ಯರ್ಸೂಚಿಯು ಆ ಪಕ್ಷದ ಅಭ್ಯರ್ಥಿಯ ಕಾರ್ಯಸೂಚಿ ಕೂಡಾ ಆಗಿರುತ್ತದೆ, ಆದುದರಿಂದ ಅವುಗಳಿಗೆ ಕಡಿವಾಣ ಹಾಕಬೇಕು ಎಂದು ಹಿರಿಯ ವಕೀಲ ಹಾಗೂ ಪ್ರಕರಣದ ಕಕ್ಷಿದಾರನಾಗಿರುವ ಕಪಿಲ್ ಸಿಬಲ್ ವಾದಿಸಿದ್ದರು.
ಹಿಂದುತ್ವವು ಧರ್ಮವಲ್ಲ, ಅದೊಂದು ಜೀವನ ವಿಧಾನವೆಂದು 1995ರಲ್ಲಿ ತಾನು ನೀಡಿದ್ದ ತೀರ್ಪನ್ನು ಮರು ಪರಿಶೀಲಿಸಲು ಸುಪ್ರೀಂ ಕೋರ್ಟ್ ಕಳೆದ ಮಂಗಳವಾರ ನಿರಾಕರಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.