
ನವದೆಹಲಿ: ಸರ್ಕಾರಿ ನೌಕರರ ವಿರುದ್ಧ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ದೂರುಗಳು ದಾಖಲಾದರೆ, ತಕ್ಷಣಕ್ಕೆ ಅಧಿಕಾರಿಗಳ ಬಂಧನ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ಪರಿಶಿಷ್ಟಜಾತಿ ಮತ್ತು ಪಂಗಡಗಳ ಜನರ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಇರುವ ಈ ಕಠಿಣ ಕಾನೂನನ್ನು ವ್ಯಾಪಕ ದುರ್ಬಳಕೆ ಮಾಡಿಕೊಳ್ಳುತ್ತಿರುವ ಆಪಾದನೆಗಳ ಹಿನ್ನೆಲೆಯಲ್ಲಿ ಕೋರ್ಟ್ ಈ ತೀರ್ಪು ನೀಡಿದೆ.
ಎಸ್‌ಸಿ,ಎಸ್‌ಟಿ ಕಾಯ್ದೆಯಡಿ ಸರ್ಕಾರಿ ನೌಕರನ ಬಂಧನಕ್ಕೆ ಮೊದಲು ಪೊಲೀಸ್ ಉಪ ವರಿಷ್ಠಾಧಿಕಾರಿ ಮಟ್ಟದ ಅಧಿಕಾರಿಗಳಿಂದ ಪ್ರಾಥಮಿಕ ತನಿಖೆ ನಡೆದಿರಬೇಕು ಎಂದು ನ್ಯಾ. ಆದರ್ಶ ಗೋಯಲ್ ಮತ್ತು ನ್ಯಾ. ಯು.ಯು. ಲಲಿತ್ ನ್ಯಾಯಪೀಠ ತಿಳಿಸಿದೆ.
ಕಾಯ್ದೆಯಡಿ ಸರ್ಕಾರಿ ನೌಕರನ ಬಂಧನಕ್ಕೂ ಮೊದಲು ಸಂಬಂಧಪಟ್ಟಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದಿರಬೇಕು ಎಂದು ತಿಳಿಸಿರುವ ಕೋರ್ಟ್, ಇಂತಹ ಪ್ರಕರಣಗಳಿಗೆ ಸಂಬಂಧಿಸಿ ಹಲವು ನಿರ್ದೇಶನಗಳನ್ನು ನೀಡಿದೆ. ಈ ಕಾನೂನಿನ ಕಠಿಣ ನಿಯಮಗಳಡಿ ಪ್ರಕರಣ ದಾಖಲಾಗಿದ್ದರೂ, ಸರ್ಕಾರಿ ನೌಕರರಿಗೆ ಜಾಮೀನು ಸಂಪೂರ್ಣ ನಿಷಿದ್ಧವಲ್ಲ ಎಂದೂ ಕೋರ್ಟ್ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.