ಸುಪ್ರೀಂ ತೀರ್ಪಿನಿಂದ ಎಸ್’ಸಿ, ಎಸ್ಟಿ ಕಾನೂನು ದುರ್ಬಲ: ಕೇಂದ್ರ

Published : Apr 02, 2018, 09:41 AM ISTUpdated : Apr 14, 2018, 01:13 PM IST
ಸುಪ್ರೀಂ ತೀರ್ಪಿನಿಂದ ಎಸ್’ಸಿ, ಎಸ್ಟಿ  ಕಾನೂನು ದುರ್ಬಲ: ಕೇಂದ್ರ

ಸಾರಾಂಶ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ  ಜನರ ಮೇಲೆ ದೌರ್ಜನ್ಯದ ಆರೋಪ ಕೇಳಿ ಬಂದಾಕ್ಷಣ  ಕೇಸು ದಾಖಲಿಸುವ ಮತ್ತು ತತ್‌ಕ್ಷಣವೇ ಆರೋಪಿಗಳನ್ನು ಬಂಧಿಸುವುದಕ್ಕೆ ತಡೆ ಹೇರಿದ ಸುಪ್ರೀಂಕೋರ್ಟ್‌ನ ಇತ್ತೀಚಿನ ತೀರ್ಪು, ಇಡೀ ಕಾಯ್ದೆಯನ್ನೇ ದುರ್ಬಲಗೊಳಿಸಲಿದೆ ಎಂದು ಕೇಂದ್ರ ಸರ್ಕಾರ ಅಭಿಪ್ರಾಯಪಟ್ಟಿದೆ. ಅಲ್ಲದೆ ನ್ಯಾಯಾಲಯದ ಈ ತೀರ್ಪಿನ ವಿರುದ್ಧ ಸೋಮವಾರವೇ ಅಫಿಡವಿಟ್ ಸಲ್ಲಿಸಲೂ ಅದು ನಿರ್ಧರಿಸಿದೆ.

ನವದೆಹಲಿ (ಏ. 02):  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ  ಜನರ ಮೇಲೆ ದೌರ್ಜನ್ಯದ ಆರೋಪ ಕೇಳಿ ಬಂದಾಕ್ಷಣ  ಕೇಸು ದಾಖಲಿಸುವ ಮತ್ತು ತತ್‌ಕ್ಷಣವೇ ಆರೋಪಿಗಳನ್ನು ಬಂಧಿಸುವುದಕ್ಕೆ ತಡೆ ಹೇರಿದ ಸುಪ್ರೀಂಕೋರ್ಟ್‌ನ ಇತ್ತೀಚಿನ ತೀರ್ಪು, ಇಡೀ ಕಾಯ್ದೆಯನ್ನೇ ದುರ್ಬಲಗೊಳಿಸಲಿದೆ ಎಂದು ಕೇಂದ್ರ ಸರ್ಕಾರ ಅಭಿಪ್ರಾಯಪಟ್ಟಿದೆ. ಅಲ್ಲದೆ ನ್ಯಾಯಾಲಯದ ಈ ತೀರ್ಪಿನ ವಿರುದ್ಧ ಸೋಮವಾರವೇ ಅಫಿಡವಿಟ್ ಸಲ್ಲಿಸಲೂ ಅದು ನಿರ್ಧರಿಸಿದೆ.

ನ್ಯಾಯಾಲಯದ ತೀರ್ಪಿನಿಂದಾಗಿ ಜನರಿಗೆ  ಕಾನೂನಿನ ಹೆದರಿಕೆ ಕಡಿಮೆಯಾಗುವುದರ ಜೊತೆಗೆ, ಹಿಂಸೆ ಹೆಚ್ಚುವ ಸಾಧ್ಯತೆ ಇದೆ. ಜೊತೆಗೆ ತುಳಿತಕ್ಕೊಳಗಾದ ಸಮುದಾಯಗಳನ್ನು ರಕ್ಷಿಸುವ ಕಾನೂನು ದುರ್ಬಲವಾಗಲಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ತನ್ನ ಪುನರ್‌ ಪರಿಶೀಲನಾ ಅರ್ಜಿಯಲ್ಲಿ ಮನವರಿಕೆ ಮಾಡುವ ಯತ್ನ ಮಾಡಲಿದೆ ಎಂದು ಮೂಲಗಳು ತಿಳಿಸಿವೆ. ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣಗಳನ್ನು ತಕ್ಷಣವೇ  ದಾಖಲಿಸಬೇಕು ಮತ್ತು ಆರೋಪಿಗಳನ್ನು ತಕ್ಷಣವೇ  ಬಂಧಿಸಬೇಕೆಂಬ ನಿಯಮವನ್ನು ನಿಷೇಧಿಸಿ ಕೋರ್ಟ್  ಇತ್ತೀಚೆಗೆ ತೀರ್ಪೊಂದನ್ನು ನೀಡಿತ್ತು. ತೀರ್ಪಿಗೆ ಸಂಬಂಧಿಸಿ ಕಳೆದ ವಾರ ಕೇಂದ್ರ ಸಚಿವರುಗಳಾದ ರಾಮ್‌ವಿಲಾಸ್  ಪಾಸ್ವಾನ್ ಮತ್ತು ಥಾವರ್‌ಚಂದ್ ಗೆಹ್ಲೋಟ್ ನೇತೃತ್ವದಲ್ಲಿ ಎನ್‌ಡಿಎ ಸಂಸದರ ನಿಯೋಗ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿತ್ತು.

ದಲಿತ ಸಂಘಟನೆಗಳಿಂದ ಇಂದು ಭಾರತ ಬಂದ್‌'ಗೆ  ಕರೆ:

ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯನ್ನು  ದುರ್ಬಲಗೊಳಿಸುವ ಸುಪ್ರೀಂ ಕೋರ್ಟ್ ಆದೇಶವನ್ನು  ಖಂಡಿಸಿ ಏ.೨ರಂದು ವಿವಿಧ ದಲಿತ ಸಮುದಾಯಗಳು ಭಾರತ್ ಬಂದ್‌ಗೆ ಕರೆ ನೀಡಿವೆ. ‘ಸಂವಿಧಾನ ಬಚಾವೋ ಸಂಘರ್ಷ  ಸಮಿತಿ’ ಬಂದ್‌ಗೆ ಕರೆ ನೀಡಿದ್ದು, ಅನಂತರ ‘ಅಖಿಲ ಭಾರತ ಆದಿ ಧರ್ಮ ಸಾಧು ಸಮಾಜ’ ಮತ್ತಿತರ ದಲಿತ ಸಮುದಾ ಯಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ. ಆದರೆ ಬಂದ್‌ಅನ್ನು ಹಿಂತೆಗೆದು ಕೊಳ್ಳುವಂತೆ ಕೇಂದ್ರ ಕಾನೂನು ಸಚಿವಾಲಯ ಮನವಿ ಮಾಡಿ, ‘ನರೇಂದ್ರ ಮೋದಿ ಸರ್ಕಾರ ಪರಿಶಿಷ್ಟ ಜಾತಿ/ಪಂಗಡದವರ
ಅಬಿವೃದ್ಧಿಗೆ ಬದ್ಧವಾಗಿದ್ದು, ಸುಪ್ರೀಂ ಆದೇಶವನ್ನು ಪುನರ್ ಪರಿಶೀಲಿಸಲಾಗುತ್ತದೆ’  ಎಂದು ಟ್ವೀಟ್ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!