ಐಎನ್‌ಎಕ್ಸ್ ಮಿಡಿಯಾ ಹಗರಣ| ಚಿದು ಜಾಮೀನು ಭವಿಷ್ಯ ಇಂದು ನಿರ್ಧಾರ| ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ಜಾಮೀನು ಅರ್ಜಿ
ನವದೆಹಲಿ[ಆ.26]: ಐಎನ್‌ಎಕ್ಸ್ ಮಿಡಿಯಾ ಹಗರಣ ಸಂಬಂಧ ಸಿಬಿಐ ವಶದಲ್ಲಿರುವ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ಜಾಮೀನು ಅರ್ಜಿಯ ಭವಿಷ್ಯ ಸೋಮವಾರ ನಿರ್ಧಾರವಾಗಲಿದೆ.
ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ನಿರಾಕರಿಸಿದ ದೆಹಲಿ ಹೈ ಕೋರ್ಟ್ ತೀರ್ಪು ಹಾಗೂ ತನ್ನನ್ನು ಸಿಬಿ ಕಸ್ಟಡಿಗೆ ವಹಿಸಿ ಕೆಳ ನ್ಯಾಯಲಯ ನೀಡಿದ ತೀರ್ಪನ್ನು ಪ್ರಶ್ನಿಸಿ ಚಿದಂಬರಂ ಸಲ್ಲಿಸಿರುವ ಅರ್ಜಿಯನ್ನು ಸುಪ್ರಿಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ. ಇದೇ ವೇಳೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ದಾಖಲಿಸಿಕೊಂಡಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರಣೆ ಕೂಡ ನಡೆಯಲಿದೆ. ಈ ಮೂರು ಪ್ರಕರಣಗಳನ್ನು ನ್ಯಾ. ಆರ್. ಭಾನುಮತಿ ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ.
INX ಮೀಡಿಯಾ ಹಗರಣಕ್ಕೆ ಸಂಬಂಧಿಸಿದ ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಐಎನ್‌ಎಕ್ಸ್ ಮಿಡಿಯಾ ಪ್ರಕರಣ ಸಂಬಂಧ ಸಿಬಿಐ ದಾಖಲಿಸಿದ್ದ ಮೊಕದ್ದಮೆ ವಿರುದ್ಧ ಚಿದು ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿ ಆ.20 ರಂದು ದೆಹಲಿ ಹೈ ಕೋರ್ಟ್ ನಿರಾಕರಿಸಿತ್ತು. ಅಲ್ಲದೇ ತುರ್ತು ವಿಚಾರಣೆ ನಡೆಸಬೇಕೆಂದು ಚಿದು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿತ್ತು. ಹಾಗಾಗಿ ಆ.21 ರ ರಾತ್ರಿ ಸಿಬಿಐ ಚಿದಂಬರಂ ಅವರನ್ನು ಬಂಧಿಸಿತ್ತು. ಅಲ್ಲದೇ ಇ.ಡಿ ದಾಖಲಿಸಿಕೊಂಡ ಪ್ರಕರಣದಲ್ಲಿ ಆ.23 ರಂದು ಸೋಮವಾರದವರೆಗೆ ಮಧ್ಯಂತರ ರಕ್ಷಣೆ ನೀಡಿತ್ತು.