
ನವದೆಹಲಿ (ಮೇ.05): ದೇಶವನ್ನೇ ಬೆಚ್ಚಿಬೀಳಿಸಿದ ನಿರ್ಭಯಾ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಇಂದು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಆ ಮೂಲಕ ಅತ್ಯಾಚಾರಿಗಳಿಗೆ ಮರಣದಂಡನೆ ಖಾಯಂ ಆಗಿದೆ. ನ್ಯಾ. ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠವು ವಿಚಾರಣೆ ನಡೆಸಿ ನಾಲ್ವರು ಅಪರಾಧಿಗಳಿಗೆ ಮರಣದಂಡನೆಯೇ ಸರಿಯಾದ ಶಿಕ್ಷೆ ಎಂದು ಅಭಿಪ್ರಾಯಪಟ್ಟಿದೆ.
ಚಲಿಸುತ್ತಿರುವ ಬಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ನಿರ್ಭಯಾ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಪೈಶಾಚಿಕ ಕೃತ್ಯ ಮೆರೆದಿದ್ದ ಆ ಆರೋಪಿಗಳಿಗೆ ಇಡೀ ಮನುಕುಲವೇ ಶಾಪಹಾಕಿತ್ತು. ಆ ಕಟುಕರನ್ನು ಗಲ್ಲಿಗೇರಿಸಲೇ ಬೇಕು ಎಂದು ದೇಶಾದ್ಯಂತ ಹೋರಾಟಗಳು ನಡೆದಿದ್ದವು. ಇದೀಗ ಈ ಪ್ರಕರಣ ಅಂತಿಮ ಹಂತ ತಲುಪಿದೆ.
2012 ಡಿಸೆಂಬರ್ 16ರ ರಾತ್ರಿ ನಡೆದ ಆ ಒಂದು ಪ್ರಕರಣ, ಇಡೀ ದೇಶದ ನಿದ್ದೆ ಗೆಡಿಸಿತ್ತು. ರಾಷ್ಟ್ರ ರಾಜಧಾನಿಯಲ್ಲಿ ಅಮಾನವೀಯವಾಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದ ಆರೋಪಿಗಳಿಗೆ ದೆಹಲಿ ಹೈಕೋರ್ಟ್ ಗಲ್ಲು ಶಿಕ್ಷೆ ವಿಧಿಸಿತ್ತು. ಆದರೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಅಪರಾಧಿಗಳು ಸುಪ್ರೀಂ ಮೊರೆಹೋಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.