
ಯಲ್ಲಾಪುರ: ಶಾಲೆಗೆ ಕಾಯಂ ಶಿಕ್ಷಕರನ್ನು ನಿಯೋಜಿಸುವವರೆಗೆ ಶಾಲೆಗೆ ಕಾಲಿಡು ವುದಿಲ್ಲ ಎಂದು ವಿದ್ಯಾರ್ಥಿಗಳೇ ಶಪಥಗೈದು ಶಾಲೆ ಪ್ರಾರಂಭವಾಗಿ ಮೂರು ದಿನ ಕಳೆದರೂ ಅತ್ತ ಸುಳಿಯದ ಘಟನೆ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಇಳೆಹಳ್ಳಿಯಲ್ಲಿ ನಡೆದಿದೆ.
ಇಲ್ಲಿನ ಸರ್ಕಾರಿ ಶಾಲೆಯಲ್ಲಿ 1ರಿಂದ 7ನೇ ತರಗತಿವರೆಗೆ ಒಟ್ಟು 54 ವಿದ್ಯಾರ್ಥಿಗಳಿದ್ದು, ನಾಲ್ಕು ಶಿಕ್ಷಕರ ಹುದ್ದೆ ಮಂಜೂರಾಗಿದೆ. ಆದರೆ ಪ್ರಸ್ತುತ ಪ್ರಭಾರಿ ಮುಖ್ಯಶಿಕ್ಷಕ ಚರಣ್ ಎ.ಆರ್. ಒಬ್ಬರೇ ಶಿಕ್ಷಕರಾಗಿ ಕಾರ್ಯನಿರ್ವಹಿಸು ತ್ತಿದ್ದಾರೆ. ಇವರಿಗೆ ಮಕ್ಕಳ ಪಾಠ ಮಾಡುವ ಜೊತೆಗೆ ಕಚೇರಿ ಕೆಲಸ ಮತ್ತಿತರ ಜವಾಬ್ದಾರಿಗಳನ್ನು ವಹಿಸಲಾಗಿದೆ. ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾ ಗುತ್ತಿದೆ. ಹೀಗಾಗಿ, ಕಾಯಂ ಶಿಕ್ಷಕರನ್ನು ನಿಯೋಜಿಸುವವರೆಗೆ ಶಾಲೆಗೆ ಬರುವುದಿಲ್ಲ ಎಂದು ವಿದ್ಯಾರ್ಥಿಗಳೇ ಶಪಥ ಮಾಡಿದ್ದಾರೆ.
ಶಾಲೆಯಲ್ಲಿ ಶಿಕ್ಷಕರ ಕೊರತೆ ಇರುವುದು ನಿಜ. ಕಳೆದ ವರ್ಷ ಮೂವರು ಅತಿಥಿ ಶಿಕ್ಷಕರನ್ನು ನಿಯೋಜಿಸ ಲಾಗಿತ್ತು. ಅವರ ಅವಧಿ ಮುಗಿದ ಕಾರಣ ಪುನಃ ಶಿಕ್ಷಕರ ಕೊರತೆ ಎದುರಾಗಿದೆ. ಇದಕ್ಕೆ ಶೀಘ್ರ ಶಾಶ್ವತ ಪರಿಹಾರ ಕಲ್ಪಿಸಲಾಗುವುದು.
ನಾರಾಯಣ ನಾಯಕ ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಾಪುರ
ಇದನ್ನು ಮಕ್ಕಳ ಪೋಷಕರೂ ಬೆಂಬಲಿಸಿದ್ದು, ಮಕ್ಕಳನ್ನು ಶಾಲೆಗೆ ಕಳುಹಿಸದೇ ಶಿಕ್ಷಣ ಇಲಾಖೆಗೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ಶಾಲೆಗೆ ಅಗತ್ಯವಿ ರುವ ಶಿಕ್ಷಕರನ್ನು ನೇಮಿಸಿ ಇಲ್ಲವಾದರೆ ಇರುವ ಒಬ್ಬ ಶಿಕ್ಷಕರನ್ನೂ ಬೇರೆಡೆ ವರ್ಗಾಯಿಸಿ ಶಾಲೆ ಬಾಗಿಲು ಮುಚ್ಚಿಬಿಡಿ ಎಂದು ಗ್ರಾಮಸ್ಥರು ಶಿಕ್ಷಣ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.